ಜೂ.7 ರಿಂದ ಕೇಂದ್ರೀಯ ವಿವಿ ಪ್ರವೇಶ ಪರೀಕ್ಷೆ
ಬೆಂಗಳೂರು: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯನ್ನು ಜೂ.7 ರಿಂದ 9 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕದ ವಿದ್ಯಾರ್ಥಿಗಳಿಗೆ 371(ಜೆ) ಕಲಂ ಅನ್ವಯ ಶೇ. 8 ಮೀಸಲು ಕಲ್ಪಿಸಲಾಗಿದೆ ಎಂದು ಪರೀಕ್ಷಾ ನಿಯಂತ್ರಕ ಡಾ. ಬಸವರಾಜ್ ಡೋಣೂರ ತಿಳಿಸಿದರು.
ಏ. 28 ರಿಂದ ಮೇ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ದೇಶದ 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲಿ 15 ಕೇಂದ್ರಗಳಿವೆ. ಪಿಯುಸಿಯಲ್ಲಿ ಶೇ. 50 ಅಂಕ (ಪ.ಜಾ/ಪ.ಪಂ ಶೇ. 45 ಅಂಕ) ಪದವಿಯಲ್ಲಿ ಶೇ. 50 (ಪ.ಜಾ/ಪ.ಪಂ. ಶೇ. 45 ಅಂಕ) ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ. 55(ಪ.ಜಾ/ಪ.ಪಂ. ಶೇ. ಶೇ. 50) ಅಂಕಗಳನ್ನು ಪಡೆದವರು ಅರ್ಜಿ ಸಲ್ಲಿಸಬಹುದು.
ವಿವಿಯಲ್ಲಿ 850 ವಿದ್ಯಾರ್ಥಿಗಳಿದ್ದು, ಈ ವರ್ಷ 600 ವಿದ್ಯಾರ್ಥಿಗಳ ಪ್ರವೇಶ ನಿರೀಕ್ಷಿಸಲಾಗಿದೆ. ಒಟ್ಟು 4,400 ಅರ್ಜಿಗಳು ಬಂದಿದ್ದು, ರಾಜ್ಯದಿಂದ 2300 ಅರ್ಜಿಗಳು ಬಂದಿವೆ. ಪ್ರವೇಶ ಪರೀಕ್ಷೆ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಅಗತ್ಯ ಅಂಕಗಳನ್ನು ಪಡೆಯುವುದು ಕಡ್ಡಾಯ ಎಂದು ಹೇಳಿದರು.
ಕುಟುಂಬದ ಆದಾಯ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿನಿಯರಿಗೆ ಮತ್ತು ಪ.ಜಾ.ಪ.ಪಂ ವಿದ್ಯಾರ್ಥಿಗಳಿಗೆ ಬೋಧನಾ ಮತ್ತು ವಸತಿ ಶುಲ್ಕದ ವಿನಾಯಿತಿ ನೀಡಲಾಗಿದೆ. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾಸಿಕ ರು. 8 ಸಾವಿರ ನೀಡಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿಪದವಿ, 14 ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿವಿಯ ಪ್ರಭಾರ ಕುಲಪತಿ ಪ್ರೊ.ಎಂ.ಎನ್. ಸುಧೀಂದ್ರರಾವ್ ಮಾತನಾಡಿ, ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರ ಭೂಮಿ, ನೀರಿನ ಸೌಲಭ್ಯ ಒದಗಿಸಿದೆ. ಕ್ಯಾಂಪಸ್ ನಿರ್ಮಾಣ ಶೇ. 60ರಷ್ಟು ಪೂರ್ಣಗೊಂಡಿದ್ದು ಇನ್ನು 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ವಿವಿ ಸಮುದಾಯ ಕಾಲೇಜಿನ ಕಾರ್ಯಕ್ರಮದಲ್ಲಿ ಹಿಂದೂಸ್ತಾನ್ ಏವಿಯೇಷನ್ ಲಿ. ಮತ್ತು ಆಚಾರ್ಯ ಪಾಠಶಾಲೆ ಸಹಯೋಗದೊಂದಿಗೆ ಶಿಕ್ಷಣ ಮೊಟಕುಗೊಳಿಸಿದ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಿ ಡಿಪ್ಲೊಮೊ ಸರ್ಟಿಫಿಕೇಟ್ ನೀಡುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

