ಮೋದಿಗೆ ಇಂದು ಪ್ರಣವ ವಚನ

ನವದೆಹಲಿ: ದೇಶ ಉಸಿರು ಬಿಗಿ ಹಿಡಿದು ಕಾಯುತ್ತಿರುವ ಕ್ಷಣ ಬಂದೇಬಿಟ್ಟಿದೆ. 125 ಕೋಟಿ ಭಾರತೀಯರ 'ಭರವಸೆಯ ತಾರೆ'ಯಾಗಿ ಉದಯಿಸಿರುವ ನರೇಂದ್ರ ದಾಮೋದರ ಮೋದಿ ದೇಶದ 15ನೇ ಪ್ರಧಾನಿಯಾಗಿ ಸೋಮವಾರ ಸಂಜೆ 6ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
63 ವರ್ಷದ ಮೋದಿ ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ನಡೆಯುವ ಐತಿಹಾಸಿಕ ಸಮಾರಂಭವನ್ನು ಸಾರ್ಕ್ ದೇಶಗಳ ಮುಖ್ಯಸ್ಥರು, ಪ್ರತಿನಿಧಿಗಳು ಸೇರಿದಂತೆ ಸುಮಾರು 4000 ಮಂದಿ ಸಾಕ್ಷೀಕರಿಸಲಿದ್ದಾರೆ.
ಚಿಕ್ಕ ಚೊಕ್ಕ ಸಂಪುಟ ಮೋದಿ ಅವರೊಂದಿಗೆ ಪ್ರಮಾಣ ಸ್ವೀಕರಿಸಲಿದ್ದು, ಸಚಿವರ ಪಟ್ಟಿ ಸೋಮವಾರ ಬೆಳಗ್ಗೆ ರಾಷ್ಟ್ರಪತಿಗಳ ಕೈ ಸೇರಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಎನ್ಡಿಎ ಸರ್ಕಾರ ರಚಿಸುವುದಾಗಿ ಘೋಷಿಸಿರುವ ಮೋದಿ, ಬಿಜೆಪಿಯ ದೀರ್ಘಕಾಲದ ಮಿತ್ರ ಶಿವಸೇನೆ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಾರ್ಟಿ ಮತ್ತು ರಾಂವಿಲಾಸ್ ಪಾಸ್ವಾನ್ ಅವರ ಲೋಕಜನಶಕ್ತಿಗೆ ಪ್ರಾತಿನಿಧ್ಯ ನೀಡುವ ಸಂಭವ ಇದೆ. ಸರ್ಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಶಿರೋಮಣಿ ಅಕಾಲಿದಳ ಘೋಷಿಸಿದೆ.
ಹೀರಾಬೆನ್ ಭಾಗಿ?: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ಮೋದಿ ಕುಟುಂಬಸ್ಥರು ಯಾರು ಎನ್ನುವ ಮಾಹಿತಿ ಭಾನುವಾರ ಸಂಜೆವರೆಗೂ ರಾಷ್ಟ್ರಪತಿ ಭವನ ತಲುಪಿಲ್ಲ. ಮೋದಿ ತಾಯಿ ಹೀರಾಬೆನ್ ಪಾಲ್ಗೊಳ್ಳುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಭಾನುವಾರದ ಬೆಳವಣಿಗೆಯಲ್ಲಿ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಸುಮಿತ್ರಾ ಮಹಾಜನ್ ಹೆಸರು ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


