ಸಂಭ್ರಮಾಚರಣೆಗೆ ಬಿಜೆಪಿ ಸಿದ್ಧತೆ
ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯಾದ್ಯಂತ ಸಂಭ್ರಮಾಚರಣೆ ನಡೆಸಲು ಬಿಜೆಪಿ ತಯಾರಿ ನಡೆಸಿಕೊಂಡಿದೆ.
ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದ ಎಲ್ಲ ತಾಲೂಕು ಘಟಕಗಳಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲು ನಿರ್ಧರಿಸಲಾಗಿದೆ. ಬ್ಲಾಕ್ ಘಟಕದ ಅಧ್ಯಕ್ಷರಿಗೆ ಈ ಸಂಬಂಧ ಸೂಚನೆ ನೀಡಲಾಗಿದ್ದು, ಮೊದಲ ಬಾರಿಗೆ ಕೇಂದ್ರದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಏರುತ್ತಿರುವುದನ್ನು ಆಚರಿಸಲು ನಿರ್ಧರಿಸಲಾಗಿದೆ.
ಎಲ್ಲ ಸಂಸದರು ದೆಹಲಿಯಲ್ಲಿ ಹಾಜರಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯ ಜವಾಬ್ದಾರಿಯನ್ನು ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರು ವಹಿಸಿಕೊಂಡಿದ್ದಾರೆ. ರಾಜ್ಯದ ನಾನಾ ಕಡೆಗಳಲ್ಲಿ ಮೋದಿ ಬೆಂಬಲಿಗರು ಅನ್ನದಾನ, ಸಿಹಿ ವಿತರಣೆ ಹಾಗೂ ಪಟಾಕಿ ಸಿಡಿಸುವ ಮೂಲಕ ಆಚರಿಸಲಿದ್ದಾರೆ. ಬೆಂಗಳೂರಿನಲ್ಲಿ ವಾರ್ಡ್ ಮಟ್ಟದಲ್ಲಿ ಲಾಡು ಹಂಚಲಾಗುತ್ತಿದ್ದು, ಮಾಜಿ ಸಚಿವ ವಿ.ಸೋಮಣ್ಣ ಅವರು ಗೋವಿಂದರಾಜನಗರ ಕ್ಷೇತ್ರವೊಂದರಲ್ಲಿಯೇ 25 ಸಾವಿರ ಲಾಡು ಹಂಚುತ್ತಿದ್ದಾರೆ. ಇನ್ನು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಅನ್ನದಾನ ನಡೆಯುತ್ತಿದೆ. ಪ್ರಮಾಣವಚನ ಕಾರ್ಯಕ್ರಮ ವೀಕ್ಷಣೆಗೆ ರಾಜ್ಯ ಪ್ರಧಾನ ಕಚೇರಿ ಎದುರು 3 ಎಇಡಿ ಸ್ಕ್ರೀನ್ ಅಳವಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

