ಪ್ರಧಾನ ಸುದ್ದಿ

9 ವಿದ್ಯಾರ್ಥಿಗಳಿಗೆ ರೌಡಿ ಶೀಟರ್ ಪಟ್ಟ

Published On :

ಬಳ್ಳಾರಿ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ ಎಬಿವಿಪಿಯ ಇಬ್ಬರು ಮುಖಂಡರು, 7 ವಿದ್ಯಾರ್ಥಿಗಳ ಮೇಲೆ ರೌಡಿ ಶೀಟರ್ ಓಪನ್ ಮಾಡಲಾಗಿದೆ.
ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಹೊರಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದು, ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಜ. 31, 2013ರಂದು ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ನಳಂದ ಹಾಸ್ಟೆಲ್‌ನಲ್ಲಿ ಕಾಲೇಜ್ ವಿದ್ಯಾರ್ಥಿ ಕೃಷ್ಣಮೂರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಶಾಲಾ-ಕಾಲೇಜು ಬಂದ್ ಮಾಡಿಸುವ ವಿಚಾರವಾಗಿ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ನಂದಿ ಶಾಲೆಯ ಗ್ಲಾಸ್‌ಗಳನ್ನು ಒಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಬಳ್ಳಾರಿ ಬಂದ್ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಶನಿವಾರ 9 ವಿದ್ಯಾರ್ಥಿ ಮುಖಂಡರನ್ನು ಪೊಲೀಸ್ ಠಾಣೆಗೆ ಕರೆಸಿದಾಗ ರೌಡಿಶೀಟರ್ ಓಪನ್ ಆಗಿರುವುದು ತಿಳಿದುಬಂದಿದೆ. ಎಬಿವಿಪಿ ವಿದ್ಯಾರ್ಥಿ ಮುಖಂಡರಾದ ಅಡವಿಸ್ವಾಮಿ, ರವಿಗೌಡ, ಮಹಾಂತೇಶ್, ಮಣಿಕಂಠ ರೆಡ್ಡಿ, ಪಾಲಾನಾಯ್ಕ, ಶಿವಪ್ರಸಾದ್, ಶ್ರೀಧರ ಕುಲಕರ್ಣಿ, ಓಂ ಪ್ರಕಾಶ್, ಪ್ರಶಾಂತ್ ಪವಾರ್ ಮೇಲೆ ರೌಡಿ ಶೀಟರ್ ಓಪನ್ ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನು ಎಬಿವಿಪಿ ವಿದ್ಯಾರ್ಥಿ ಮುಖಂಡ ಅಡವಿ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಗೂಂಡಾ ಕಾಯ್ದೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್ ಸಿಂಗ್ ರಾಥೋರ್ ಅವರನ್ನು ಸುದ್ದಿಗಾರರು ಸಂಪರ್ಕಿಸಿದಾಗ, 9 ಮಂದಿಯ ಚಲನವಲನ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ವರ್ತನೆ ಹೀಗೇ ಮುಂದುವರಿದರೆ, ಗೂಂಡಾ ಕಾಯ್ದೆಯಡಿ ಕೇಸು ದಾಖಲು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.