ಪ್ರಮಾಣವಚನ ಸಮಾರಂಭಕ್ಕೆ ಹೋಗಲು ಆಗಿಲ್ಲ

ಬೆಂಗಳೂರು: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಹೋಗಲು ಆಗಿಲ್ಲ. ಬದಲಾಗಿ ಅವರಿಗೆ ಶುಭಾಶಯ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿತ್ತು. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣ ಹೋಗಲು ಆಗಲಿಲ್ಲ ಎಂದು ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಸಮಾರಂಭಕ್ಕೆ ಹೋಗದಿದ್ದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ಇದನ್ನು ಮಾಧ್ಯಮಗಳು ದೊಡ್ಡದಾಗಿ ಮಾಡುವ ಅಗತ್ಯವೂ ಇಲ್ಲ. ಆಹ್ವಾನ ನನಗಷ್ಟೆ ಬಂದಿದ್ದರಿಂದ ಇತರ ಪ್ರತಿನಿಧಿಯನ್ನು ಕಳುಹಿಸಲಾಗಿಲ್ಲ. ಆದ್ದರಿಂದ ಮೋದಿ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದು ಶುಭ ಕೋರಿದ್ದೇನೆ. ದೇಶಕ್ಕೆ ಒಳ್ಳೆಯದಾಗಲಿ, ಉತ್ತಮ ಆಡಳಿತ ಸಿಗಲಿ ಎಂದು ಶುಭ ಹಾರೈಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್, ಕೇಂದ್ರದಲ್ಲಿ ಬಿಜೆಪಿ ಅಧಿಕಾರವಿದ್ದ ಮಾತ್ರಕ್ಕೆ ಪರಸ್ಪರ ಸಹಕಾರ ಇರುವುದಿಲ್ಲ ಎಂದು ಭಾವಿಸುವುದು ತಪ್ಪು. ಈ ಹಿಂದೆ ಕೇಂದ್ರದಲ್ಲಿ ಯುಪಿಎ ಇದ್ದಾಗ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸಹಕಾರ ನೀಡುತ್ತದೆ. ಅಗತ್ಯ ಬಿದ್ದಾಗ ವಿವಿಧ ವಿಚಾರಗಳಿಗೆ ರಾಜ್ಯದಿಂದ ಕೇಂದ್ರಕ್ಕೆ ನಿಯೋಗ ಕರೆದೊಯ್ಯಬೇಕಾಗುತ್ತದೆ.
ಕೇಂದ್ರ ಮತ್ತು ರಾಜ್ಯಗಳಲ್ಲಿ ಬೇರೆ ಪಕ್ಷಗಳ ರಾಜ್ಯಗಳಿದ್ದರೂ ದೇಶ ಒಂದೇ ತಾನೇ? ಪಕ್ಷಗಳು ಬೇರೆ ಆದರೂ ದೇಶ ಮತ್ತು ಸರ್ಕಾರ ನಮ್ಮದೇ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


