ಪ್ರಧಾನ ಸುದ್ದಿ

3ರಂದು ಮೋದಿ-ಜಯಾ ಭೇಟಿ

3ರಂದು ಮೋದಿ-ಜಯಾ ಭೇಟಿ
Published On :

ಚೆನ್ನೈ: ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಆಹ್ವಾನಿಸಿದ್ದನ್ನು ಪ್ರತಿಭಟಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಹಿಷ್ಕರಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಜೂನ್ 3ರಂದು ಭೇಟಿ ಮಾಡಲಿದ್ದಾರೆ.
'ಸೌತ್‌ಬ್ಲಾಕ್‌ನ ಪ್ರಧಾನಿ ಕಚೇರಿಯಲ್ಲಿ ಭೇಟಿ ನಿಗದಿಯಾಗಿದೆ. ರಾಜ್ಯಕ್ಕೆ ಕೇಂದ್ರದಿಂದ ನೆರವು ಕೋರಿ ಮುಖ್ಯಮಂತ್ರಿ ಮನವಿ ಸಲ್ಲಿಸಲಿದ್ದಾರೆ' ಎಂದು ತಮಿಳುನಾಡು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. 2011ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಆಗಿನ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನೂ ಭೇಟಿ ಮಾಡಿದ್ದ ಜಯಾ, ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಕೋರಿ ಮನವಿ ಸಲ್ಲಿಸಿದ್ದರು. ಶ್ರೀಲಂಕಾ ತಮಿಳರ ವಿಚಾರವನ್ನೂ ಆ ಸಂದರ್ಭ ಪ್ರಸ್ತಾಪಿಸಿದ್ದರು.
ರಾಜಕೀಯೇತರವಾಗಿ ನೋಡಿದರೆ ಜಯಾ-ಮೋದಿ ನಡುವೆ ಆತ್ಮೀಯ ಸಂಬಂಧ ಇದೆ. ಜಯಾ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮೋದಿ ಭಾಗವಹಿಸಿದ್ದರೆ, 2012ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಮೋದಿ ಪ್ರಮಾಣ ಸ್ವೀಕರಿಸುವ ಸಮಾರಂಭದಲ್ಲಿ ಜಯಾ ಪಾಲ್ಗೊಂಡಿದ್ದರು. ರಾಜ್ಯಸಭೆಯಲ್ಲಿ ಜಯಾರ ಎಐಎಡಿಎಂಕೆ 10 ಸದಸ್ಯರನ್ನು ಹೊಂದಿರುವುದರಿಂದ ರಾಜಕೀಯ ಮೈತ್ರಿ ಕುರಿತಂತೆಯೂ ಇಬ್ಬರು ಧುರೀಣರು ಚರ್ಚಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.