ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದ ಆರೋಪದಲ್ಲಿ ಮೂಡಿಗೆರೆ ಪೊಲೀಸರು ಜಮಾಲುದ್ದೀನ್ ...
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದ ಆರೋಪದಲ್ಲಿ ಮೂಡಿಗೆರೆ ಪೊಲೀಸರು ಜಮಾಲುದ್ದೀನ್ (21) ಎಂಬಾತನನ್ನು ಬಂಧಿಸಿದ್ದಾರೆ.

ಬುಧವಾರ ಸಂಜೆ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು  17ರ ಹರೆಯದ ಬಾಲಕಿ ಮೂಡಿಗೆರೆ ಪೊಲೀಸರಿಗೆ ದೂರು ನೀಡಿದ್ದಳು. ಇಲ್ಲಿನ ಕೃಷ್ಣಾಪುರ ಎಂಬಲ್ಲಿ ಆತ ನನ್ನನ್ನು ಅಪಹರಿಸಿದ್ದು, ನಂತರ ಅತ್ಯಾಚಾರವೆಸಗಿ ಟೌನ್ ಪಂಚಾಯತ್ ಆಫೀಸ್ ಬಳಿ ಬಿಟ್ಟಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ಹೋಗುವ ವೇಳೆ ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ POSCO ಕಾಯ್ದೆಯಡಿ ಪ್ರಕರಣ  ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com