ಕವಿವಿ ವಿಶ್ರಾಂತ ಕುಲಪತಿ ವಾಲೀಕಾರ್ ವಿರುದ್ಧದ ಎಫ್‌ಐಆರ್ ರದ್ದು

ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಚ್.ಬಿ.ವಾಲೀಕಾರ್ ಅವರ ವಿರುದ್ಧದ ಎಫ್‌ಐಆರ್...
ವಾಲೀಕಾರ್
ವಾಲೀಕಾರ್

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಚ್.ಬಿ.ವಾಲೀಕಾರ್ ಅವರ ವಿರುದ್ಧದ ಎಫ್‌ಐಆರ್ ಅನ್ನು ಧಾರವಾಡ ಹೈಕೋರ್ಟ್ ಗುರುವಾರ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಕೋರಿ ವಾಲೀಕಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಬಿಳ್ಳಪ್ಪ ಅವರು, ಕುಲಪತಿಗಳು ವಿಶ್ವವಿದ್ಯಾಲಯದ ನೌಕರರಲ್ಲ, ಹೀಗಾಗಿ ಅವರ ವಿರುದ್ಧ ವಿವಿ ಕಾಯ್ದೆ 2000, ಸೆಕ್ಷನ್ 8/1 ರಡಿ ಕೇಸ್ ದಾಖಲಿಸಲು ಬರುವುದಿಲ್ಲ ಮತ್ತು ಈ ಪ್ರಕರಣ ರಾಜ್ಯಪಾಲರ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿವಿಯ ನೇಮಕಾತಿಯಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯಪಾಲ ವಜುಭಾಯಿ ವಾಲಾ ಅವರು ಇತ್ತೀಚಿಗೆ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದರು.

ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ನೇಮಕಾತಿ ಅವ್ಯವಹಾರ ಸಂಬಂಧ ವಾಲೀಕರ್ ಸೇರಿದಂತೆ ವಿವಿಯ ನಾಲ್ಕು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ನಂಬಿಕೆ ದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ ಕುಲಪತಿ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಸಹ ನಡೆಸಿದ್ದರು. ಆದರೆ ಕೋರ್ಟ್ ಇದೀಗ ಕುಲಪತಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ್ದು ಲೋಕಾಯುಕ್ತಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com