ಪ್ರಧಾನ ಸುದ್ದಿ

ಹರಿಯಾಣದಲ್ಲಿ ಬದಲಾವಣೆಯ ಸಮಯ ಬಂದಿದೆ: ಮೋದಿ

ಹರಿಯಾಣದಲ್ಲಿ ಬದಲಾವಣೆಯ ಸಮಯ ಬಂದಿದೆ: ಮೋದಿ
Published On :

ಕರ್ನಾಲ್: ಸುಮಾರು 60 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಭಿವೃದ್ಧಿಯ ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಕಾಂಗ್ರೆಸ್ ಮುಕ್ತ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಹರಿಯಾಣದ ಕರ್ನಾಲ್‌ನಲ್ಲಿ ಬಿಜೆಪಿ ಚುನಾವಣ ಪ್ರಚಾರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ಹರಿಯಾಣವನ್ನು ಬದಲಿಸುವ ಸಮಯ ಈಗ ಬಂದಿದೆ ಹೀಗಾಗಿ ಪ್ರಸ್ತುತ ಹರಿಯಾಣವನ್ನು ಅಭಿವೃದ್ಧಿಯ ಪತದಲ್ಲಿ ಕೊಂಡೊಯ್ಯಲು ಬಿಜೆಪಿಗೆ ಅವಕಾಶ ನೀಡಿ. ಈ ವಿಧಾನಸಭೆ ಚುನಾವಣೆ ಹರಿಯಾಣದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದರು.

ಹರಿಯಾಣದಲ್ಲಿ ಬಿಜೆಪಿಗೆ ಸರ್ಕಾರವನ್ನು ಅಧಿಕಾರಕ್ಕೆ ಬಂದರೆ ಹರಿಯಾಣವನ್ನು ಅಭಿವೃದ್ಧಿಯ ಪತದಲ್ಲಿ ನಡೆಸುವುದಾಗಿ ಹೇಳಿದ ಮೋದಿ ಅವರು, ಕರ್ನಾಲ್ ನಗರವನ್ನು ಸ್ಮಾರ್ಟ್ ಸಿಟಿ ಹಾಗೂ ರಾಜ್ಯಾದ್ಯಂತ 24 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಭರವಸೆ ನೀಡಿದರು. ನಿರಂತರ ವಿದ್ಯುತ್ ಪೂರೈಕೆಯಾಗದೆ ರೈತರು ಕಂಗಾಲಾಗಿದ್ದಾರೆ. ನಿರಂತರ ವಿದ್ಯುತ್ ಪೂರೈಕೆಯೊಂದಿಗೆ ರೈತರ ಜಮೀನುಗಳಿಗೆ ನೀರು ಒದಗಿಸಲು ಬಯಸುತ್ತೇನೆ ಎಂದರು.

ಕೇಂದ್ರದಲ್ಲಿ ಬಲಿಷ್ಠ ಬಿಜೆಪಿ ಸರ್ಕಾರದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿದೆ. ಇದು ದೇಶದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಪ್ರೇರಣೆ ನೀಡಿದೆ. ಸದ್ಯ ಪ್ರಧಾನಿಯಾಗಿರುವ ನನಗೆ ಹರಿಯಾಣದ ಅಭಿವೃದ್ಧಿ ಮಾಡಲು ಅವಕಾಶ ಒದಗಿಬಂದಿದೆ. ನಾನು ನಿಮ್ಮ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.

ನಿಮಗೆ ಶಾಂತಿ, ಅಭಿವೃದ್ಧಿ ಬೇಕೆಂದರೆ ಬಿಜೆಪಿಗೆ ಮತ ನೀಡಿ ಬಹುಮತದ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಆಗ ಹರಿಯಾಣದ ಅಭಿವೃದ್ಧಿ ಸಾಧ್ಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.