ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಶಿವಸೇನೆ

ಮುಂಬೈ; ಶಿವಸೇನೆ ಮಂಗಳವಾರವೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ಮುಂದುವರಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ರ್ಯಾಲಿ ನಡೆಸುತ್ತಿರುವುದರ ಬಗ್ಗೆ ಖಂಡಿಸಿದ ಶಿವಸೇನೆ, ಮೋದಿ ರ್ಯಾಲಿಯಲ್ಲಿ ಭಾಗವಹಿಸುವುದಕ್ಕಾಗಿ ದೆಹಲಿಯಲ್ಲಿ ತಮ್ಮ ಕೆಲಸವನ್ನು ಕಡೆಗಣಿಸುತ್ತಿದ್ದಾರೆ ಎಂದು ಹೇಳಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಮೋದಿ ವಿರುದ್ಧ ಕಿಡಿಕಾರಿದ ಸೇನೆ, ಮಹಾರಾಷ್ಟ್ರದ ಚುನಾವಣಾ ಪ್ರಚಾರದಲ್ಲಿ ದಿನಕ್ಕೊಂದು ಭರವಸೆಗಳನ್ನು ನೀಡುತ್ತಿರುವ ಮೋದಿ ಪ್ರಧಾನಿ ಆದ ನಂತರ ನಮ್ಮ ರಾಜ್ಯಕ್ಕೆ ಯಾವ ಕೊಡುಗೆಯನ್ನು ನೀಡಿದ್ದಾರೆ? ಎಂದು ಪ್ರಶ್ನಿಸಿದೆ.
ಅದೇ ವೇಳೆ ಮಹಾರಾಷ್ಟ್ರಕ್ಕೆ ಭೇಟಿ ನೀಡುವ ಮೂಲಕ ಮೋದಿ ರಾಜ್ಯದ ಖಜಾನೆಯಲ್ಲಿನ ದುಡ್ಡು ಪೋಲು ಮಾಡುತ್ತಾರೆ ಎಂದು ಆರೋಪಿಸಿದೆ.
ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ಮೋದಿಯವರು ಈಗಲೂ ಗುಜರಾತ್‌ನ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದು, ಬೇರೆ ರಾಜ್ಯಗಳ ಬೆಳವಣಿಗೆಯತ್ತ ಗಮನ ಹರಿಸುವುದಿಲ್ಲ ಎಂದು ದೂರಿದ್ದಾರೆ.
ಸದ್ಯ ಮೋದಿಯವರು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ರ್ಯಾಲಿ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


