ಪ್ರಧಾನ ಸುದ್ದಿ

ನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಅತ್ಯಾಚಾರ ಆರೋಪ

ನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಅತ್ಯಾಚಾರ ಆರೋಪ
Published On :

ಬಳ್ಳಾರಿ:  'ಮಾದೇಶ ' ಚಿತ್ರದ ನಿರ್ಮಾಪಕ, ರಿಯಲ್ ಎಸ್ಟೇಟ್ ಉದ್ಯಮಿ ಗೋವರ್ಧನ್ ಮೂರ್ತಿ ವಿರುದ್ಧ ಮುಂಬೈ ಮೂಲದ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ್ದಾಳೆ. ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ಬಾರ್ ನಲ್ಲಿ ಸರ್ವೀಸ್  ಗರ್ಲ್ ಆಗಿದ್ದ ಈಕೆಯ ಮೇಲೆ ಗೋವರ್ಧನ್ 4 ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಅತ್ಯಾಚಾರಕ್ಕೊಳಗಾದ ಯುವತಿ ಖಾಸಗಿ ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾಳೆ.

ತಾನು ಬಾರ್ ನಲ್ಲಿ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾಗ ಗೋವರ್ಧನ್ ಅವರ ಪರಿಚಯವಾಗಿತ್ತು. ತದನಂತರ ಗೋವರ್ಧನ್ ಅವರ ಫಾರ್ಮ್ ಹೌಸ್‌ಗೆ  ಬೆದರಿಸಿ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರಕ್ಕೊಳಪಡಿಸಲಾಗಿದೆ ಎಂದು ಬಳ್ಳಾರಿಯಲ್ಲಿ  ಸುದ್ದಿಗೋಷ್ಠಿ ಕರೆದ ಯುವತಿ ಹೇಳಿದ್ದಾಳೆ. ಆತನ ಬಳಿಗೆ ಹೋಗಲು ನಿರಾಕರಿಸಿದಾಗ ತನ್ನ ಬಲವಂತವಾಗಿ ಕರೆಸಿಕೊಳ್ಳುತ್ತಿದ್ದು, ಕೊಲೆ ಬೆದರಿಕೆಯನ್ನೊಡ್ಡಲಾಗುತ್ತಿತ್ತು. ಕಳೆದ 1 ತಿಂಗಳಿನಲ್ಲಿ ತಾನು 4 ಬಾರಿ ಅವರನ್ನು ಭೇಟಿ ಮಾಡಿದ್ದು, ಆತನ ಫಾರ್ಮ್ ಹೌಸ್ ಎಲ್ಲಿದೆ ಎಂಬುದೂ ನನಗೆ ಗೊತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ.

ನನಗೆ ಬೆಂಬಲ ನೀಡುವವರು ಯಾರೂ ಇಲ್ಲದೇ ಇರುವುದರಿಂದ ಇಲ್ಲಿಯವರೆಗೆ ಈ ಅನ್ಯಾಯವನ್ನು ಸಹಿಸಿಕೊಂಡು ಇದ್ದೆ ಎಂದು ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದಾಳೆ ಯುವತಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.