ಪ್ರಧಾನ ಸುದ್ದಿ

ರಾಘವೇಶ್ವರ ಶ್ರೀ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು

ರಾಘವೇಶ್ವರ ಶ್ರೀ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು
Published On :

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ತನಿಖೆಗೆ ಗುರುವಾರ ಹೈಕೋರ್ಟ್ ಅಸ್ತು ಎಂದಿದೆ.

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು, ಅವರನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಬಹುದು ಎಂದು ಹೇಳಲಾಗುತ್ತಿತ್ತು.

ಶ್ರೀಗಳ ವಿರುದ್ಧ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಇಂದು ತೆರವುಗೊಳಿಸಿರುವ ಹೈಕೋರ್ಟ್‌ನ ಏಕ ಸದಸ್ಯಪೀಠ, ಅವರ ವಿರುದ್ಧದ ಸಿಐಡಿ ತನಿಖೆ ಮುಂದುವರೆಯಲಿ ಎಂದು ಆದೇಶಿಸಿದೆ. ಇನ್ನು ಸ್ವಾಮೀಜಿ ಬಂಧನಕ್ಕೆ ತಡೆ ನೀಡುವಂತೆ ಕೋರಿ ಸ್ವಾಮೀಜಿಯ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಸಹ ಕೋರ್ಟ್‌ ವಜಾಗೊಳಿಸಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ಐಪಿಸಿ ಸೆಕ್ಷನ್ 506 ಹಾಗೂ 354ರ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು, ತನಿಖೆ ಸಹ ಆರಂಭಿಸಿದ್ದರು. ಆದರೆ ಶ್ರೀಗಳು ಹೈಕೋರ್ಟ್ ಮೊರೆ ಹೋಗಿ ಪ್ರಕರಣದ ತನಿಖೆಗೆ ತಡೆ ತಂದಿದ್ದರು.

ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆದರಿಕೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಗಾಯಕಿ ಪ್ರೇಮಲತಾ ದಿವಾಕರ್ ಪರವಾಗಿ ಪುತ್ರಿ ಅಂಶುಮತಿ ಶಾಸ್ತ್ರಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.