ಸಿಎಂ ಸಿದ್ದರಾಮಯ್ಯ ಡಿವಿಎಸ್ ಫೋನ್ ಕದ್ದಾಲಿಕೆ ಮಾಡಿಲ್ಲ: ಪರಮೇಶ್ವರ್

ತುಮಕೂರು: ಕಾರ್ತಿಕ್ ಗೌಡ ವಿವಾ(ದ)ಹ ಪ್ರಕರಣ ಸಂಬಂಧ ನಗರ ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರ ಕುಟುಂಬಸ್ಥರ ದೂರವಾಣಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದಾಲಿಕೆ ಮಾಡಿಲ್ಲ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಕೇಂದ್ರ ಸಚಿವ ಸದಾನಂದಗೌಡರ ಫೋನ್ ಕದ್ದಾಲಿಕೆಗೆ ಸಿದ್ದರಾಮಯ್ಯ ಅವರು ಕುಮ್ಮಕ್ಕು ನೀಡಿಲ್ಲ. ಈ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಆರೋಪಿಗಳಲ್ಲಿ ಯಾವುದೇ ಹುರುಳಿಲ್ಲ. ಅಲ್ಲದೆ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಗಮನ ಹರಿಸುತ್ತಾರೆ ಎಂದರು.
ಇದೇ ವೇಳೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹಿಂದೇಟು ಹಾಕುತ್ತಿರುವ ಸಿದ್ದರಾಮಯ್ಯ ಹಾಗೂ ಮೇಲಿನ ಮುನಿಸನ್ನು ವ್ಯಕ್ತಪಡಿಸದ ಪರಮೇಶ್ವರ ಅವರು, ನಿಗಮ, ಮಂಡಳಿಗಳಿಗೆ ನೇಮಕಾತಿ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ.
ಡಿವಿಎಸ್ ಪುತ್ರ ಕಾರ್ತಿಕ್ ಗೌಡ ಮತ್ತು ನಟಿ ಮೈತ್ರಿಯಾ ಗೌಡ ಅವರ ವಿವಾಹ ಪ್ರಕರಣ ಸಂಬಂಧ ಸದಾನಂದಗೌಡ ಅವರ ಕುಟುಂಬದ ಐದು ಮಂದಿಯ ದೂರವಾಣಿ ಸಂಭಾಷಣೆಯನ್ನು ದಾಖಲಿಸಿಕೊಳ್ಳುವಂತೆ ಆರ್ಟಿ ನಗರ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಅವರು ಸೂಚಿಸಿದ್ದಾರೆಂಬ ಸಂಗತಿ ಈದೀಗ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣ ಸಂಬಂಧ ತಮ್ಮ ದೂರವಾಣಿ ಕರೆಗಳನ್ನು ಕದ್ದಾಲಿಸಿದ್ದ ಪೊಲೀಸರ ಕ್ರಮದ ವಿರುದ್ಧ ಡಿವಿ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


