ರೌಡಿ ಕವಳ ಹತ್ಯೆ ಆರೋಪಿ ನಖ್ರಾ ಬಾಬುನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಂಗಳೂರು: ನಗರದ ಬಿಟಿಎಂ ಲೇಔಟ್ ಬಳಿಯ ಜೈಭೀಮ್ ನಗರದಲ್ಲಿ ಹಾಡಹಗಲೇ ರೌಡಿಗಳು ಅಟ್ಟಹಾಸ ಮೆರೆದಿದ್ದು, ರೌಡಿ ಕವಳ ಹತ್ಯೆ ಆರೋಪಿ ನಖ್ರಾ ಬಾಬು ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಕವಳ ಅಲಿಯಾಸ್ ವಿಜಯ್ ಕುಮಾರ್ ಕೊಲೆಯ ಪ್ರಮುಖ ಆರೋಪಿಯಾಗಿದ್ದ ನಖ್ರಾ ಬಾಬು ಮೇಲೆ ದುಷ್ಕಮಿಗಳು ಇಂದು ದಾಳಿ ನಡೆಸಿ ಮಾರಕಾಸ್ಕ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಜತೆಗಿದ್ದ ವಿಶ್ವ, ಹೀರಾಲಾಲ್‌ಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಸಿಲಿದ್ದಾರೆ.
ಘಟನಾ ಸ್ಥಳಕ್ಕೆ ಮಡಿವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೌಡಿ ಕವಳನ ಹತ್ಯೆಗೆ ಪ್ರತಿಕಾರವಾಗಿ ನಖ್ರಾ ಬಾಬು ಮೇಲೆ ದಾಳಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕವಳನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ನಖ್ರಾ ಬಾಬುನನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದು ಹೊರಬಂದಿದ್ದರು.
ಸಂಧಾನ ಮಾತುಕತೆ ವಿಫಲ
ಕವಳ ಹತ್ಯೆಗೆ ಪ್ರತಿಕಾರವಾಗಿ ನಖ್ರಾ ಬಾಬು ಮೇಲೆ ಹತ್ಯೆಗೆ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಇಂದು ನಂಜುಂಡ ಎಂಬುವರ ನೇತೃತ್ವದಲ್ಲಿ ಜೈಭೀಮ್ ನಗರದಲ್ಲಿನ ಕುಮಾರ್ ಎಂಬುವರ ಮನೆಯಲ್ಲಿ ಸಂಧಾನ ಮಾತುಕತೆಗೆ ಸೇರಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಸಿದೆ. ಈ ವೇಳೆ ನಂಜುಂಡನ 12 ಮಂದಿ ರೌಡಿಗಳು ನಖ್ರಾ ಬಾಬು ಹಾಗೂ ಆತನ ಸಹಚರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಕವಳ ಹತ್ಯೆ
ಕವಳ ಅಲಿಯಾಸ್ ವಿಜಯ್ ಕುಮಾರ್‌ನನ್ನು ಬೆಂಗಳೂರು ಹೊರವಲಯದ ಹೊಸೂರು ರಸ್ತೆಯಲ್ಲಿ ಇನ್ನೊವಾ ಕಾರಿನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಕೊಲೆಗೈದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕವಳ ರಸ್ತೆಯಲ್ಲೇ ಮೃತಪಟ್ಟಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


