ಪ್ರಧಾನ ಸುದ್ದಿ

ಮತಗಟ್ಟೆ ಸಮೀಕ್ಷೆ ನಂತರ ಮೆತ್ತಗಾದ ಶಿವಸೇನೆ

ಮತಗಟ್ಟೆ ಸಮೀಕ್ಷೆ ನಂತರ ಮೆತ್ತಗಾದ ಶಿವಸೇನೆ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುಮತ ಸಾಧಿಸಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೊರಬಂದಾಗಿನಿಂದ ಅಬ್ಬರಿಸುತ್ತಿದ್ದ ಶಿವಸೇನೆ ಇದೀಗ ಮೆತ್ತಗಾಗಿದೆ. ಅದೇ ವೇಳೆ ಬಿಜೆಪಿ ಜತೆ ಮತ್ತೆ ಮೈತ್ರಿ ಹೊಂದಲು ಶಿವಸೇನೆ ಬಯಸುತ್ತಿದೆ ಎಂಬ ಸುದ್ದಿಯೂ ಕೇಳಿ ಬರುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿದ್ದ ಶಿವಸೇನೆ ಇನ್ಮುಂದೆ ಯಾವುದೇ ರೀತಿಯ ವಾಗ್ವಾದಗಳನ್ನು ಮಾಡುವುದಿಲ್ಲ ಎಂದು ಶುಕ್ರವಾರ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿತ್ತು.

ಈವರೆಗೆ ಎರಡು ಪಕ್ಷಗಳ ನಡುವೆ ಆದದ್ದು ಆಗಿ ಹೋಯ್ತು. ಮಹಾರಾಷ್ಟ್ರದಲ್ಲಿ ಉತ್ತಮ ಸರ್ಕಾರ ಬರಬೇಕಾಗಿದೆ. ಅದಕ್ಕಾಗಿ ನಾವು ಪರಸ್ಪರ ಒಪ್ಪಂದ ಮಾಡಿಕೊಳ್ಳುಲು ತಯಾರಿದ್ದೇವೆ. ಇನ್ಮುಂದೆ ಪರಸ್ಪರ ಕೆಸರೆರೆಚಾಟ ಬೇಡ ಎಂದು ಉದ್ಧವ್ ಠಾಕ್ರೆ ತಮ್ಮ ಪಕ್ಷದ ಮುಖವಾಣಿ "ಸಾಮ್ನಾ"ದಲ್ಲಿ ಬರೆದಿದ್ದಾರೆ.

ಚುನಾವಣೆಯ ಮುನ್ನ ಮಹಾರಾಷ್ಟ್ರದಲ್ಲಿ 15 ವರ್ಷ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿ ಮುರಿದು ಬಿದ್ದ ಕಾರಣ ಇವೆರಡೂ ಪಕ್ಷಗಳು ವಿಧಾನಸಭಾ ಚುನಾವಣೆಯಲ್ಲಿ ಭಾರೀ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಆದಾಗ್ಯೂ, ಈ ಬಾರಿ ಬಿಜೆಪಿ ಮಹಾರಾಷ್ಟ್ರದಲ್ಲಿ ಬಹುಮತಗಳಿಸುವ ಮೂಲಕ ಏಕಪಕ್ಷೀಯ ಗೆಲವು ಸಾಧಿಸಲಿದ್ದು, ಶಿವಸೇನೆ ಎರಡನೇ ಸ್ಥಾನ ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.