ಪ್ರಧಾನ ಸುದ್ದಿ

ಮಹಾರಾಷ್ಟ್ರ, ಹರ್ಯಾಣ ಚುನಾವಣೆ: ಮತ ಎಣಿಕೆ ಶುರು

ಮಹಾರಾಷ್ಟ್ರ, ಹರ್ಯಾಣ ಚುನಾವಣೆ: ಮತ ಎಣಿಕೆ ಶುರು
(ಸಾಂದರ್ಭಿಕ ಚಿತ್ರ)
Published On :

ಮುಂಬೈ: ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ವಿಧಾನಸಭೆ ಚುನಾವಣೆಯ ಮತ ಎಣಿಕೆ ಈಗ ಆರಂಭವಾಗಿದೆ. ಈಗಾಗಲೇ ಮತಗಟ್ಟೆ ಸಮೀಕ್ಷೆಗಳು ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲೋದು ಎಂದು ಹೇಳಿವೆ.

ಭಾನುವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಮಹಾರಾಷ್ಟ್ರದ 269 ಹಾಗೂ ಹರ್ಯಾಣದ 57 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭಿಸಲಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 63.13 ಶೇ. ಮತದಾನವಾಗಿದ್ದು, ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಅಂದರೆ 76.54 ಶೇ. ಮತದಾನ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ 288 ಹಾಗು ಹರ್ಯಾಣದಲ್ಲಿ 90 ವಿಧಾನಸಭಾ ಸೀಟುಗಳಿಗೆ ಚುನಾವಣೆ ನಡೆದಿದ್ದು, ಯಾರು ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.

ಆದಾಗ್ಯೂ , ಪ್ರಧಾನಿ ಮೋದಿ ಅವರಿಗೆ ಈ ಚುನಾವಣೆ ಮಹತ್ವದ್ದಾಗಿದ್ದು, ಬಿಜೆಪಿ ಗೆದ್ದರೆ ದೇಶದಲ್ಲಿ ಇನ್ನೂ ಮೋದಿ ಅಲೆ ಇದೆ ಎಂದು ಸಾಬೀತಾದಂತಾಗುತ್ತದೆ. ಒಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಸದ್ಯದ ಕುತೂಹಲ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.