ಪ್ರಧಾನ ಸುದ್ದಿ

ಮನೋಹರ್ ಲಾಲ್ ಖಟ್ಟರ್ ಹರ್ಯಾಣ ನೂತನ ಸಿಎಂ

ಮನೋಹರ್ ಲಾಲ್ ಖಟ್ಟರ್ ಹರ್ಯಾಣ ನೂತನ ಸಿಎಂ
Published On :

ಚಂಡೀಗಢ: ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಅಯ್ಕೆ ಮಾಡಲಾಗಿದೆ. ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರ ನೇತೃತ್ವದಲ್ಲಿ ಮಂಗಳವಾರ ಚಂಡೀಗಢದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

90 ಸದಸ್ಯರಿರುವ ಹರ್ಯಾಣ ವಿಧಾನಸಭೆಯಲ್ಲಿ 47 ಸ್ಥಾನಗಳನ್ನು ಗಳಿಸಿರುವ ಬಿಜೆಪಿಗೆ ದೀಪಾವಳಿಗೆ ಮುನ್ನವೇ ಹರ್ಯಾಣದಲ್ಲಿ ಸರ್ಕಾರ ರಚನೆ ಮಾಡಿ ಪ್ರತಿಜ್ಞಾ ಸ್ವೀಕಾರ ನಡೆಸಬೇಕೆಂಬುದು ಆಶಯವಾಗಿತ್ತು.

ಆದಾಗ್ಯೂ, ರಾಜಕಾರಣದಲ್ಲಿ ಜಾತಿ ಆಧಾರಿಸಿ ಮಣೆ ಹಾಕುವ ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಜಾಟ್ ಸಮುದಾಯಕ್ಕೆ ಸೇರದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದರೂ, ಮುಖ್ಯಮಂತ್ರಿ ಸ್ಥಾನಕ್ಕೆ ಜಾಟ್ ಸಮುದಾಯಕ್ಕೆ ಸೇರಿದ ವ್ಯಕ್ತಿ ಅಥವಾ ಜಾಟ್ ಸಮುದಾಯಕ್ಕೆ ಸೇರದ ವ್ಯಕ್ತಿಯನ್ನು ಆಯ್ಕೆ ಮಾಡಬೇಕೋ ಎಂಬ ವಿಷಯದ ಬಗ್ಗೆ ಈ ವರೆಗೆ ಚರ್ಚೆಗಳು ನಡೆದು ಬರುತ್ತಿತ್ತು. ಸಿಎಂ ರೇಸ್‌ನಲ್ಲಿ ಕ್ಯಾ. ಅಭಿಮನ್ಯು ಸಿಂಗ್ ಮತ್ತು ಮನೋಹರ್ ಲಾಲ್ ಖಟ್ಟರ್ ನಡುವೆ ಸ್ಪರ್ಧೆ ನಡೆದಿದ್ದು, ಬಿಜೆಪಿ ಖಟ್ಟರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.