ಭೂ ಕಬಳಿಕೆಗೆ ಮುಗುದಾರ: ಜಯಚಂದ್ರ

ಬೆಂಗಳೂರು: ಭೂ ಕಬಳಿಕೆ ನಿಷೇಧ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದು, ಭೂ ಕಬಳಿಕೆಗೆ ಮುಗುದಾರ ಹಾಕಲಾಗುವುದು ಎಂದು ರಾಜ್ಯ ಕಾನೂನು ಸಚಿವ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಚಂದ್ರ ಅವರು, ಭೂ ಕಬಳಿಕೆ ನಿಷೇಧ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಭೂ ಕಬಳಿಕೆ ಮಾಡಿರುವವರಿಗೆ ಕಂಟಕ ಪ್ರಾಯವಾಗಲಿದೆ. ಭೂ ಕಬಳಿಕೆ ನಿಷೇಧ ಕಾಯ್ದೆ ನಿನ್ನೆಯಿಂದಲೇ ಜಾರಿಯಲ್ಲಿದೆ ಎಂದರು. ವಿಧೇಯಕ ಜಾರಿ ಹಿನ್ನೆಲೆ ಶೀಘ್ರದಲ್ಲೇ ರಾಜ್ಯದಲ್ಲಿ ವಿಶೇಷ ಕೋರ್ಟ್ಗಳನ್ನು ಸ್ಥಾಪಿಸಲಾಗುವುದು. ಸ್ವಯಂಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುವುದು ಎಂದರು.
ಭೂ ಕಬಳಿಕೆ ಮಾಡಿರುವ ಆರೋಪಗಳು ಸಾಬೀತಾದರೆ ಆರೋಪಿಗಳಿಗೆ 1 ವರ್ಷದಿಂದ 3 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 20 ಸಾವಿರ ರುಪಾಯಿ ದಂಡ ವಿಧಿಸಬಹುದಾಗಿದೆ.
ರಾಜ್ಯದಲ್ಲಿ ಮುಜರಾಯಿ ಇಲಾಖೆ ಹಾಗೂ ವಕ್ಛ್ ಮಂಡಳಿಗೆ ಸೇರಿದ ಜಮೀನನ್ನು ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು.
ವಕ್ಛ್ ಮಂಡಳಿಗೆ ಸೇರಿದ ಜಮೀನನ್ನು ಕಬಳಿಸಿ ನಿವೇಶನ ಮಾಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಕ್ಛ್ ಸಚಿವ ಖಮರುಲ್ಲಾ ಇಸ್ಲಾಂ ವಿರುದ್ಧ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


