ಮೋಹನ್ ಭಾಗ್ವತ್ ಭೇಟಿ ಮಾಡಿದ ಗಡ್ಕರಿ

ನಾಗ್ಪುರ: ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರಾಗ್ತಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಬಿಜೆಪಿ ಬೆಂಬಲಿಗರು ಪ್ರಸ್ತುತ ಸ್ಥಾನಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಗಡ್ಕರಿ ಸಿಎಂ ರೇಸ್ನಿಂದ ಹಿಂದೆ ಸರಿದಿರುವುದು ಗೊತ್ತಿರುವ ವಿಷ್ಯವೇ.
ಇದೀಗ ಶನಿವಾರ ಗಡ್ಕರಿ ಅವರು ರಾಷ್ಟ್ರೀಯ ಸ್ವಯಂಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ದೇವೇಂದ್ರ ಫಡ್ನವಿಸ್ ಅವರನ್ನು ನಿನ್ನೆ ಭೇಟಿ ಮಾಡಿದ ನಂತರ ಗಡ್ಕರಿ ಭಾಗ್ವತ್ ಅವರನ್ನು ಭೇಟಿಯಾಗಿರುವುದು ಹಲವಾರು ಊಹಾಪೋಹಗಳನ್ನು ಸೃಷ್ಟಿಸಿದೆ.
ಆದಾಗ್ಯೂ, ತಾನು ದೀಪಾವಳಿ ಶುಭಾಶಯಗಳನ್ನು ತಿಳಿಸುವುದಕ್ಕಾಗಿಯೇ ಭಾಗ್ವತ್ ಅವರನ್ನು ಭೇಟಿ ಮಾಡಿದ್ದೆ ಎಂದು ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.
ಇನ್ನೊಂದೆಡೆ ಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವಿಸ್ ಅವರನ್ನು ಆರೆಸ್ಸೆಸ್ಸ್ ಬೆಂಬಲಿಸುವುದರ ಬಗ್ಗೆ ಭಾಗ್ವತ್ ಮತ್ತು ಗಡ್ಕರಿ ನಡುವಿನ ಭೇಟಿ ನಡೆದಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


