ಪ್ರಧಾನ ಸುದ್ದಿ

ಪತ್ರಕರ್ತರ ಜತೆ ಮೋದಿ ಚಹಾಕೂಟ

ಪತ್ರಕರ್ತರ ಜತೆ ಮೋದಿ ಚಹಾಕೂಟ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಾಧ್ಯಮದವರಿಗೆ ಚಹಾ ಕೂಟವೊಂದನ್ನು ಹಮ್ಮಿಕೊಂಡಿದ್ದು ಬೆಳಗ್ಗೆ 11.30 ವೇಳೆಗೆ ಬಿಜೆಪಿ ಪ್ರಧಾನ ಕಾರ್ಯಾಲಯದಲ್ಲಿ ಈ ಚಹಾಕೂಟ ನಡೆಯಲಿದೆ.

ಪ್ರಧಾನಿ ಪಟ್ಟಕ್ಕೇರಿದ ನಂತರ ಮೋದಿ ಅವರು ತಮಗೆ ಏನು ಹೇಳಬೇಕೋ, ಎಲ್ಲಿ ಹೇಳಬೇಕೋ ಅಷ್ಟನ್ನು ಮಾತ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದರು. ಆದಾಗ್ಯೂ, ಇದೇ ಮೊದಲ ಬಾರಿಗೆ ಮೋದಿ ಮಾಧ್ಯಮವದರೊಂದಿಗೆ ಈ ರೀತಿಯ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಪ್ರಧಾನ ಕಾರ್ಯಾಲಯದಲ್ಲಿ ಮೋದಿ ಮತ್ತು ಪತ್ರಕರ್ತರ ಟೀಪಾರ್ಟಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ 'ದೀಪಾವಳಿ ಮಿಲನ್‌' ಎಂದು ಹೆಸರಿಡಲಾಗಿದೆ.

11.50 ರ ವೇಳೆಗೆ ಮೋದಿ ಬಿಜೆಪಿ ಕಚೇರಿಗೆ ತಲುಪಲಿದ್ದು, ಪತ್ರಕರ್ತರು, ಸಂಪಾದಕರ ಜತೆ 1 ಗಂಟೆ ಕಾಲ ಸಂವಾದ ನಡೆಸಲಿದ್ದಾರೆ.

ಪ್ರಧಾನಿ ಮೋದಿ ನಾಳೆ ಎನ್‌ಡಿಎ ಮಿತ್ರ ಪಕ್ಷಗಳಿಗೆ ಚಹಾ ಕೂಟ ಏರ್ಪಡಿಸಿದ್ದು,  ಇಲ್ಲಿ ಮಹಾ ಸರ್ಕಾರ ರಚನೆಯ ಮುನ್ನ ಬಿಜೆಪಿ ಮತ್ತು ಶಿವಸೇನೆ ಒಂದಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈ ಚಹಾಕೂಟಕ್ಕೆ ಶಿವಸೇನೆಯ ಸಂಸದರು ಭಾಗವಹಿಸುವುದಾಗಿ ಹೇಳಿದ್ದರೂ,  ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಸ್ತುತ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದು ಸದ್ಯ ನಿರ್ಧಾರವಾಗಿಲ್ಲ ಎಂದು ಬಲ್ಲಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.