ಪ್ರಧಾನ ಸುದ್ದಿ

ನನಗೀಗ ದೆಹಲಿ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಶೀಲಾ ದೀಕ್ಷಿತ್

ನನಗೀಗ ದೆಹಲಿ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಶೀಲಾ ದೀಕ್ಷಿತ್
Published On :

ನವದೆಹಲಿ: "ನನಗೀಗ ದೆಹಲಿ ರಾಜಕಾರಣದಲ್ಲಿ ಆಸಕ್ತಿಯಿಲ್ಲ" -ಹೀಗೆ ಹೇಳಿದವರು ಬೇರ್ಯಾರೂ ಅಲ್ಲ, ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್.

ನವದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ಅಧಿಕಾರ ನಡೆಸಿದ್ದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶೀಲಾ, ಚುನಾವಣೆ ಬಂದರೆ, ಕಾಂಗ್ರೆಸ್ ಸ್ಪರ್ಧಿಸಿಲಿದೆ, ಉತ್ತಮವಾಗಿಯೇ ಸ್ಪರ್ಧೆಯನ್ನೊಡ್ಡಲಿದೆ ಎಂದು ಹೇಳಿದ್ದಾರೆ.

2013 ಡಿಸೆಂಬರ್‌ನಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸೀಟುಗಳಲ್ಲಿ ಕಾಂಗ್ರೆಸ್  ಕೇವಲ 8 ಸೀಟುಗಳನ್ನು ಗಳಿಸಿಕೊಂಡಿತ್ತು.
 
ಸದ್ಯ ಅತಂತ್ರದಲ್ಲಿರುವ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಲಿ ಎಂದು ರಾಜ್ಯಪಾಲ ನಜೀಬ್ ಜಂಗ್‌ರ ನಿರ್ಧಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಂಕಿತವೂ ಸಿಕ್ಕಿದೆ.

ದೆಹಲಿ ವಿಧಾನಸಭೆಯಲ್ಲಿ  ಬಿಜೆಪಿಗೆ 29 ಶಾಸಕರು ಮತ್ತು ಆಪ್‌ಗೆ 27 ಶಾಸಕರು ಇದ್ದಾರೆ. ಯಾವುದೇ ಪಕ್ಷಕ್ಕೆ  ಸರ್ಕಾರ ರಚನೆ ಮಾಡಬೇಕಾದರೆ ಕನಿಷ್ಠ 36 ಶಾಸಕರ ಬೆಂಬಲ ಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.