ಸುಪ್ರೀಂಗೆ 627 ಕಪ್ಪುಹಣ ಖಾತೆದಾರರ ಮಾಹಿತಿ ಸಲ್ಲಿಕೆ

ನವದೆಹಲಿ: ವಿದೇಶದ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿರುವ 627 ಖಾತೆದಾರರ ವಿವವರವನ್ನು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಸಲ್ಲಿಸಿದೆ.
ತೆರಿಗೆ ವಂಚಿಸಿ ವಿದೇಶಿ ಬ್ಯಾಂಕ್‌ಗಳಲ್ಲಿ ಹಣ ಇಟ್ಟ ಎಲ್ಲಾ ಖಾತೆದಾರರ ಹೆಸರನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿನ್ನೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರ ಕಪ್ಪು ಹಣ ಇಟ್ಟ ಆರೋಪ ಎದುರಿಸುತ್ತಿರುವ ಎಲ್ಲ 627 ಮಂದಿ ಹೆಸರನ್ನೂ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಅಲ್ಲದೆ ವಿದೇಶಗಳೊಂದಿಗಿನ ಒಪ್ಪಂದದ ಹಿನ್ನೆಲೆಯಲ್ಲಿ ಖಾತೆದಾರರ ವಿವವರವನ್ನು ಬಹಿರಂಗಪಡಿಸಬೇಡಿ ಎಂದು ಮನವಿ ಮಾಡಿದೆ.
ಕಪ್ಪು ಹಣ ಸಂಬಂಧ ಮೂರು ಪಟ್ಟಿಗಳನ್ನು ಸಲ್ಲಿಸಿರುವ ಕೇಂದ್ರ ಸರ್ಕಾರ, ಮೊದಲ ಪಟ್ಟಿಯಲ್ಲಿ ವಿದೇಶಗಳ ನಡುವಿನ ಒಪ್ಪಂದದ ವಿವರ ಮತ್ತು ಎರಡನೇ ಪಟ್ಟಿಯಲ್ಲಿ ಕಪ್ಪು ಹಣ ಹೊಂದಿರುವವರ ವಿವರ ಹಾಗೂ ಮೂರನೇ ಪಟ್ಟಿಯಲ್ಲಿ ಕಪ್ಪು ಹಣದ ಕುರಿತ ತನಿಖಾ ವಿವವರನ್ನು ತಿಳಿಸಲಾಗಿದೆ.
ಪಟ್ಟಿ ಸ್ವೀಕರಿಸಿದ ಕೋರ್ಟ್, ಮುಚ್ಚಿದ ಲಕೋಟೆಯನ್ನು ಹಾಗೆಯೇ ಕಪ್ಪು ಹಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ನೀಡಲಾಗುವುದು. ಎಸ್‌ಐಟಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮಾತ್ರ ಈ ಲಕೋಟೆ ತೆರೆಯುವ ಅಧಿಕಾರ ಇದ್ದು, ಅವರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದೆ. ಅಲ್ಲದೆ ಕಪ್ಪು ಹಣದ ಕುರಿತು 2015ರ ಮಾರ್ಚ್ 31ರೊಳಗೆ ತನಿಖೆ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಸಂಬಂಧ ಎಸ್‌ಐಟಿಗೆ ಸಹಕಾರ ನೀಡುವಂತೆಯೂ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಕೋರ್ಟ್ ಆದೇಶಿಸಿದೆ.
ಕೇಂದ್ರ ಸರ್ಕಾರ ಸಲ್ಲಿಸಿರುವ ಲಕೋಟೆಯನ್ನು ಸುಪ್ರೀಂ ಕೋರ್ಟ್ ಇಂದೇ ಎಸ್‌ಐಟಿಗೆ ನೀಡಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಷಾ ನೇತೃತ್ವದ ಎಸ್‌ಐಟಿ ಮೊದಲ ಹಂತದಲ್ಲಿ 220 ಖಾತೆದಾರರ ವಿರುದ್ಧ ತನಿಖೆ ನಡೆಸಲಿದೆ.
ಇನ್ನು ಸುಪ್ರೀಂ ಕೋರ್ಟ್‌ಗೆ ಪಟ್ಟಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, ವಿದೇಶದಲ್ಲಿ ಕಪ್ಪು ಹಣ ಹೊಂದಿರುವ 627 ಖಾತೆದಾರರ ವಿವವರ, ಖಾತೆ ಸಂಖ್ಯೆ ಹಾಗೂ ಖಾತೆಯಲ್ಲಿರುವ ಹಣದ ಮೊತ್ತದ ಮಾಹಿತಿಯನ್ನು ಕೋರ್ಟ್ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


