ಪ್ರಧಾನ ಸುದ್ದಿ

ಹದಿನೈದು ದಿನಗಳಲ್ಲಿ ಅರವಿಂದ್ ಮಾಯಾರಾಮ್ ಎರಡು ಬಾರಿ ಎತ್ತಂಗಡಿ

ಹದಿನೈದು ದಿನಗಳಲ್ಲಿ ಅರವಿಂದ್ ಮಾಯಾರಾಮ್ ಎರಡು ಬಾರಿ ಎತ್ತಂಗಡಿ
Published On :

ನವದೆಹಲಿ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದ ಅರವಿಂದ್ ಮಾಯಾರಾಮ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ ನಂತರ ಇದೀಗ ಮತ್ತೆ ಅವರನ್ನು ಎತ್ತಗಂಡಿ ಮಾಡಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹದಿನೈದು ದಿನಗಳಲ್ಲಿ ಅರವಿಂದ್ ಮಾಯಾರಾಮ್ ಅವರನ್ನು ಎರಡು ಬಾರಿ ವರ್ಗಾವಣೆ ಮಾಡಿದ್ದು ಅಚ್ಚರಿಯನ್ನುಂಟು ಮಾಡಿದೆ.

ಹಣಕಾಸು ಖಾತೆಯ ನಾಲ್ವರು ಕಾರ್ಯದರ್ಶಿಗಳ ಪೈಕಿ ಅತ್ಯಂತ ಹಿರಿಯರಾಗಿದ್ದ ಮಾಯಾರಾಮ್ ಅವರು ವಿತ್ತ ಮತ್ತು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯ ಜಂಟಿ ಹೊಣೆಗಾರಿಕೆಯನ್ನು ಹೊಂದಿದ್ದರು. ರಾಜಸ್ಥಾನ ಕೇಡರ್‌ಗೆ ಸೇರಿದ ಮಾಯಾರಾಮ್ 1978ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.

ಮಾಯಾರಾಮ್‌ಗೆ ಅಕ್ಟೋಬರ್ 16ರಂದು ಪ್ರವಾಸೋದ್ಯಮ ಕಾರ್ಯದರ್ಶಿಯಾಗಿ ನೇಮಕವಾಗುವಂತೆ ಆದೇಶಿಸಲಾಗಿತ್ತು. ಆದರೆ ಇದೀಗ ಸಚಿವ ಸಂಪುಟದ ನೇಮಕಾತಿ ಸಮಿತಿ (ಎಸಿಸಿ)ಯು ಆದೇಶವನ್ನು ರದ್ದುಗೊಳಿಸಿ, ಅವರನ್ನು ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.