ಇ -ಸಿಗರೇಟ್ ನಿಷೇಧ ಚಿಂತನೆ

ನವದೆಹಲಿ: ಭಾರತದಲ್ಲಿ ಇಲೆಕ್ಟ್ರಾನಿಕ್ ಸಿಗರೇಟ್ನಿಂದಲೂ ಆರೋಗ್ಯ ಹಾಳಾಗುತ್ತಿದ್ದು, ಅದಕ್ಕೆ ನಿಷೇಧ ಹೇರುವ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮದವರಲ್ಲಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಅಗಸ್ಟ್ ತಿಂಗಳಿನಲ್ಲೇ ಇ ಸಿಗರೇಟ್ ನಿಷೇಧದ ಬಗ್ಗೆ ತೀರ್ಮಾನ ಕೈಗೊಂಡಿತ್ತು.
ಇ ಸಿಗರೇಟ್ಗಳು ಬ್ಯಾಟರಿ ಚಾಲಿತ ಸಿಗರೇಟ್ಗಳಾಗಿದ್ದು, ಇವು ನಿಕೋಟಿನ್ ಅಂಶವಿರುವ ಹೊಗೆಯನ್ನು ಹೊರ ಸೂಸುತ್ತವೆ. ಇದರಲ್ಲಿ ಹೊಗೆಸೊಪ್ಪು ಬದಲು ನಿಕೋಟಿನ್ ಇದೆ. ಆದರೆ ಇವುಗಳು ಸುರಕ್ಷಿತವಾಗಿವೆ ಎಂದು ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿತ್ತು. ಆದರೆ ಇದೂ ಕೂಡಾ ಹೊಗೆಬತ್ತಿ ಸೇದುವಂತೆ ಅಪಾಯವನ್ನು ತಂದುಕೊಡುತ್ತದೆ ಎಂಬ ವಿರುದ್ಧ ದನಿಯೂ ಕೇಳಿ ಬಂದಿತ್ತು.
ಭಾರತದಲ್ಲಿ ಇವುಗಳಿಗೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದರೂ, ಭಾರತ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಇನ್ನೆರಡು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಹೆಸರು ಬಹಿರಂಗ ಪಡಿಸಲಿಚ್ಛಿಸಿದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರತಿ ವರ್ಷ ಭಾರತದಲ್ಲಿ ತಂಬಾಕು ಸೇವನೆಯಿಂದ ಸುಮಾರು 900,000 ಜನರು ಸಾವನ್ನಪ್ಪುತ್ತಾರೆ. ಇದಕ್ಕೆ ಕಡಿವಾಣ ಹಾಕದೇ ಇದ್ದರೆ 2020ರ ವೇಳೆಗೆ ತಂಬಾಕಿಗೆ ಬಲಿಯಾಗುವವರ ಸಂಖ್ಯೆ 1.5 ಮಿಲಿಯನ್ಗೆ ತಲುಪಬಹುದು ಎಂದು ಅಂತಾರಾಷ್ಟ್ರೀಯ ತಂಬಾಕು ನಿಯಂತ್ರಣ ಮಂಡಳಿ ಹೇಳಿದೆ.
ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಗಳ ಬಗ್ಗೆ ನರೇಂದ್ರ ಮೋದಿ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆದಾಗ್ಯೂ, ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯಕ್ಕೆ ಹಾನಿಕಾರಕ ಎಂಬುದನ್ನು ಸ್ಪಷ್ಟವಾಗಿ ಬರೆದಿರಬೇಕು ಎಂದು ಸರ್ಕಾರ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


