ಪ್ರಧಾನ ಸುದ್ದಿ

ರಾಹುಲ್ ಹೊಣೆಗಾರಿಕೆ ತೆಗೆದುಕೊಳ್ಳಲಿ: ದಿಗ್ವಿಜಯ್ ಸಿಂಗ್

ರಾಹುಲ್  ಹೊಣೆಗಾರಿಕೆ ತೆಗೆದುಕೊಳ್ಳಲಿ: ದಿಗ್ವಿಜಯ್ ಸಿಂಗ್
Published On :

ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ  ಪಕ್ಷದ ಸಂಪೂರ್ಣ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಇದು ತಕ್ಕ ಸಮಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ನಮ್ಮ ಪಕ್ಷ ಎಂದಿಗೂ ಯುವ ಕಾರ್ಯಕರ್ತರನ್ನು ಪ್ರೋತ್ಸಾಹಿಸಿದೆ. ಆದ್ದರಿಂದಲೇ ರಾಹುಲ್  ಗಾಂಧಿ ಪಕ್ಷದ ಹೊಣೆಯನ್ನು ವಹಿಸಲು ತಕ್ಕ ಸಮಯ ಇದು. ಆದಾಗ್ಯೂ, ಈ ಬಗ್ಗೆ ಚಿಂತಿಸಲು ಅವರಿಗೆ ಸಮಯ ನೀಡಲಾಗಿದೆ ಎಂದು ಸಿಂಗ್ ಶನಿವಾರ ಹೇಳಿದ್ದಾರೆ.

ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್‌ಗೆ ಈ ಬಾರಿಯ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಬೇಕಾಗಿ ಬಂದಿತ್ತು.

ಶನಿವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಂಡಿಲ್ಲ. ಇದರಿಂದಾಗಿ ಮುಂದಿನ ಜವಾಬ್ದಾರಿ ರಾಹುಲ್ ಹೆಗಲ ಮೇಲೆ ಬೀಳುತ್ತದೆ ಎಂಬ ಊಹಾಪೋಹಗಳಿಗೆ ಹೆಚ್ಚಿನ ಪುಷ್ಠಿ ಸಿಕ್ಕಿದಂತಾಗಿದೆ.

ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ಸತತ ಸೋಲುಂಡಿರುವ ಕಾಂಗ್ರೆಸ್ ಪಕ್ಷ ದೇಶದಲ್ಲಿ ಪಕ್ಷದ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಲು ರಾಜ್ಯದ ಮುಖಂಡರನ್ನು ದೆಹಲಿಗೆ ಕರೆದಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.