ಮಾರ್ಚ್ ಬಳಿಕವೇ ಪುನಾರಚನೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿರುವ ಅಸಮರ್ಥ ಸಚಿವರನ್ನು ಗುರುತಿಸುವುದಕ್ಕೆ ಸಮಯ ಕೋರಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿವರಿಗೆ ಪತ್ರ ಬರೆದಿದ್ದಾರೆ.
ಸಂಪುಟ ವಿಸ್ತರಣೆಗೆ ನನ್ನ ಒಲವಿದೆ ಎಂದು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಸಿದ್ದರಾಮಯ್ಯ ಅವರು ಸೋನಿಯಾಗೆ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಸೋರಿಕೆಯಾಗಿದ್ದು, ಕಾಂಗ್ರೆಸ್ ಪಾಳಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಚಟುವಟಿಕೆಯನ್ನು ಗರಿಗೆದರಿಸಿದೆ. ಸೋರಿಕೆಯಾದ ಮಾಹಿತಿ ಪ್ರಕಾರ, 2015ರ ಮಾರ್ಚ್ 14ರವರೆಗೆ ನಾನು ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ. ಸದ್ಯಕ್ಕೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುತ್ತೇನೆ. ಆಗ ಸರ್ಕಾರಕ್ಕೂ ಎರಡು ವರ್ಷ ತುಂಬುತ್ತದೆ. ಹೀಗಾಗಿ ಅಲ್ಲಿಯವರೆಗೆ ಕೆಲ ಸಚಿವರ ಸಾಮಥ್ಯ ಅಳೆಯವುದಕ್ಕೆ ಕಾಲಾವಕಾಶಬೇಕು ಎಂದು ಕೋರಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


