ಪ್ರಧಾನ ಸುದ್ದಿ

ಬಗರ್‌ಹುಕುಂ ಹೋರಾಟ ಕಾಗೋಡು ಬರಲಿ: ಬಿಜೆಪಿ

ಬಗರ್‌ಹುಕುಂ ಹೋರಾಟ ಕಾಗೋಡು ಬರಲಿ: ಬಿಜೆಪಿ
Published On :

ಶಿವಮೊಗ್ಗ: ಬಗರ್‌ಹುಕುಂ ಹೋರಾಟವನ್ನು ತೀವ್ರವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಿರುವ ಬಿಜೆಪಿಯು, ಈ ಪಕ್ಷಾತೀತ ಹೋರಾಟದ ನೇತೃತ್ವವನ್ನು ಇದುವರೆಗೆ ಸ್ಪೀಕರ್ ಸ್ಥಾನದಿಂದ ಈ ಸಮಸ್ಯೆ ಬಗ್ಗೆ ಮಾತನಾಡಿರುವ ಕಾಗೋಡು ತಿಮ್ಮಪ್ಪ ಅವರು ವಹಿಸಿಕೊಳ್ಳಲಿ ಎಂದು ದಾಳ ಉರುಳಿಸಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಅವರು, ಬಗರ್‌ಹುಕುಂ ಸಾಗುವಳಿದಾರರ  ಸಮಸ್ಯೆ ಅರಿತಿರುವ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಸಾಗುವಳಿದಾರರ ಪರ ಹೋರಾಟದ ನೇತೃತ್ವ ವಹಿಸುವುದಾದರೆ ಬಿಜೆಪಿ ಅವರ ಬೆಂಬಲಕ್ಕೆ ನಿಲ್ಲಲಿದೆ ಎಂದರು.

ಸುಪ್ರೀಂ ತೀರ್ಪಿನ ನೆಪದಲ್ಲಿ ರಾಜ್ಯದ ಲಕ್ಷಾಂತರ ಬಗರ್ ಹುಕುಂ ಸಾಗುವಳಿದಾರರನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ನೋಟಿಸ್ ನೀಡುತ್ತಿದೆ. ಬಗರ್‌ಹುಕುಂ ರೈತರ ಪರ ಪಕ್ಷಾತೀತ ಹೋರಾಟ ರೂಪಿಸಲು ಬಿಜೆಪಿ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಈ ದಿಕ್ಕಿನಲ್ಲಿ ಹೋರಾಟಗಳನ್ನೂ ಮಾಡಿದ್ದಾರೆ. ಹೀಗಾಗಿ ಬಿಜೆಪಿಯ ಈ ಪಕ್ಷಾತೀತ ಹೋರಾಟದ ನೇತೃತ್ವವನ್ನು ಅವರೇ ವಹಸಿಬೇಕೆಂದು ಬಿಜೆಪಿ ಬಯಸುತ್ತದೆ ಎಂದರು.

ಇದೊಂದೇ ತೀರ್ಪು ಏಕೆ?
ಅಧಿಕಾರಿಗಳು ನ್ಯಾಯಾಲಯದ ಎಲ್ಲಾ ತೀರ್ಪುಗಳನ್ನು ಅನುಷ್ಠಾನಕ್ಕೆ ತರುವುದಿಲ್ಲ. ಆದರೆ, ಬಡ ರೈತರಿಗೆ ಮಾತ್ರ ನೋಟಿಸ್ ನೀಡುತ್ತಿರುವುದೇಕೆ? ಅಕ್ರಮ ಮರಳು ಸಾಗಾಣಿಕೆ, ಗಣಿಗಾರಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ನ್ಯಾಯಾಲಯ ನೀಡಿರುವ ತೀರ್ಪನ್ನು ಜಾರಿಗೆ ತಂದಿಲ್ಲ. ಆದರೆ, ಬಡ ಸಾಗುವಳಿದಾರರಿಗೆ ಸಂಬಂಧಿಸಿದ ತೀರ್ಪನ್ನು ಮಾತ್ರ ಅನುಷ್ಠಾನಗೊಳಿಸಲು ಹೊರಟಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.