ಅಸ್ಸಾಂ: ಪ್ರವಾಹಕ್ಕೆ 32 ಬಲಿ

ಗುವಾಹಟಿ: ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 16 ಮೃತ ಶರೀರಗಳನ್ನು ಪತ್ತೆ ಹಚ್ಚಿದ್ದು, ಇದೀಗ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೇರಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆ ಮತ್ತು ವಿಪತ್ತು ನಿರ್ವಹಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಂದ ನೂರರಷ್ಟು ಜನರನ್ನು ಸುರುಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಮಂಗಳವಾರದ ನಂತರ ಪ್ರಸ್ತುತ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು 13 ಜಿಲ್ಲೆಗಳಲ್ಲಿ ಒಟ್ಟು 8.4 ಲಕ್ಷ ನೆರೆ ಸಂತ್ರಸ್ತರು ಇದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಹೇಳಿದೆ.
ಗುರುವಾರ ಗೋಲ್‌ಪಾರಾ ಜಿಲ್ಲೆಯ ಬೋಲ್‌ಬೋಲಾ ಮತ್ತು ಕೃಷ್ಣೈ ಪ್ರದೇಶಗಳಿಂದ 6 ಮೃತ ಶರೀರಗಳನ್ನು ಪತ್ತೆ ಹಚ್ಚಲಾಗಿತ್ತು.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರಾಜ್ಯಾದ್ಯಂತ 162 ಪರಿಹಾರ ಶಿಬಿರಗಳನ್ನು ತೆರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


