

ಬೆಂಗಳೂರು: ತಮಿಳ್ನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣ ದ ಬಗ್ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ. ಆದರೆ ಇದೀಗ ಕೆಲವೊಂದು ನಾಟಕೀಯ ಬೆಳವಣಿಗೆಗಳು ಆರಂಭವಾಗಿವೆ.
ಅದೇನೆಂದರೆ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ತೀರ್ಮಾನ ಹೊರಬೀಳಬೇಕಿತ್ತು. ಆದರೆ ಭದ್ರತೆಯ ನೆಪವೊಡ್ಡಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಇದೀಗ ವಿಚಾರಣೆ ಸ್ಥಳ ಬದಲಿಸುವಂತೆ ಜಯಲಲಿತಾ ಪರವಾಗಿ ಕೃಷ್ಣಮೂರ್ತಿ ಎಂಬ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕೆಂದು ವಕೀಲರು ಅರ್ಜಿ ಸಲ್ಲಿಸಿದ್ದು ಇಂದು ಮಧ್ಯಾಹ್ನ 2ಕ್ಕೆ ಕೃಷ್ಣಮೂರ್ತಿ ಅವರ ಅರ್ಜಿ ವಿಚಾರಣೆ ನಡೆಯಲಿದೆ.