ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ರಾಜಿನಾಮೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರು ಸಿಎಂ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ.
ಪೃಥ್ವಿರಾಜ್ ಚೌಹಾಣ್ ಅವರು ಸಂಜೆ ತಮ್ಮ ರಾಜಿನಾಮೆ ಪತ್ರವನ್ನು ಮಹಾರಾಷ್ಟ್ರ ರಾಜ್ಯಪಾಲ ಸಿ.ವಿ ರಾವ್ ಅವರಿಗೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್‌ನೊಂದಿಗಿನ 15 ವರ್ಷಗಳ ಮೈತ್ರಿಗೆ ನಿನ್ನೆ ಎನ್‌ಸಿಪಿ ಅಂತ್ಯ ಹಾಡಿತ್ತು. ಅಲ್ಲದೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ನೀಡಿದ್ದ ಬೆಂಬಲವನ್ನು ಎನ್‌ಸಿಪಿ ವಾಪಸ್ ಪಡೆದುಕೊಂಡಿತ್ತು.
288 ಸ್ಥಾನಗಳ ಪೈಕಿ ಎನ್‌ಸಿಪಿಯ 62 ಶಾಸಕರು ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಗಾದಿಗೇರಿದ್ದ ಪೃಥ್ವಿರಾಜ್ ಚೌಹಾಣ್ ಅವರು ಎನ್‌ಸಿಪಿ ಬೆಂಬಲವನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಎನ್‌ಸಿಪಿ ಬೆಂಬಲ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ರಾಷ್ಟ್ರಪತಿ ಆಡಳಿತ ಏರುವಂತೆ ಬಿಜೆಪಿ ಪ್ರಸ್ತಾವನೆಯನ್ನು ರಾಜ್ಯಪಾಲರ ಮುಂದಿಟ್ಟಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತಾಗಿ ಸಲಹೆ ನೀಡುವಂತೆ ಗೃಹ ಸಚಿವಾಲಯಕ್ಕೆ ರಾಜ್ಯಪಾಲ ಸಿ.ವಿ ರಾವ್ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


