ಪ್ರಧಾನ ಸುದ್ದಿ

ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಜಾ: ಬೆಂಗಳೂರಲ್ಲೇ ತೀರ್ಪು

ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಜಾ: ಬೆಂಗಳೂರಲ್ಲೇ ತೀರ್ಪು
Published On :

ಬೆಂಗಳೂರು: ತಮಿಳ್ನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಬಗ್ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ  ನಾಳೆ ವಿಚಾರಣೆ ನಡೆಯಲಿದೆ. ವಿಚಾರಣೆಯನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಭದ್ರತೆಯ ನೆಪವೊಡ್ಡಿ ವಿಚಾರಣೆ ಸ್ಥಳ ಬದಲಿಸುವಂತೆ ಜಯಲಲಿತಾ ಪರವಾಗಿ ಕೃಷ್ಣಮೂರ್ತಿ ಎಂಬ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದೆ.

ಇಂದು ಮಧ್ಯಾಹ್ನ ಪ್ರಸ್ತುತ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೃಷ್ಣಮೂರ್ತಿಯವರನ್ನು ತರಾಟೆಗೆ ತೆಗೆದುಕೊಂಡಿದೆ. ಜಯಲಲಿತಾ ಅವರೇ ಭದ್ರತೆ ಕೇಳಿಲ್ಲ ಅವರಿಗೆ ಭದ್ರತೆ ನೀಡುವಂತೆ ಕೇಳಲು ನೀವ್ಯಾರು? ಅವರಿಗೆ ಯಾರಾದರೂ ಬೆದರಿಕೆ ಹಾಕಿದ್ದಾರಾ? ಅವರಿಗೆ ಅಭದ್ರತೆ ಕಾಡುತ್ತಿದೆಯೋ ಅಥವಾ ನಿಮಗೋ? ಎಂದು ಸುಪ್ರೀಂ ಕೋರ್ಟ್ ಕೃಷ್ಣಮೂರ್ತಿ ಅವರನ್ನು ಪ್ರಶ್ನಿಸಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದದಿಂದ ಬೆದರಿಕೆ ಗ್ರಹಿಸಿ ತಾನು ಭದ್ರತೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾಗಿ ಕೃಷ್ಣಮೂರ್ತಿ ಹೇಳಿದ್ದಾರೆ. ಅವರ ವಾದವನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಜಯಲಲಿತಾ ಅವರು ಗೃಹ ಸಚಿವರೂ ಆಗಿದ್ದಾರೆ, ಅವರಿಗೆರಾಜ್ಯ ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ನೀಡುತ್ತದೆ. ಅರ್ಜಿ ವಿಚಾರಣೆ ಸ್ಥಳ ಬದಲಾಯಿಸುವುದಿಲ್ಲ ಬೆಂಗಳೂರಿನಲ್ಲೇ ಪ್ರಕರಣದ ತೀರ್ಪು ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.