ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ

ನ್ಯೂಯಾರ್ಕ್: ಐದು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅದ್ಧೂರಿ ಸ್ವಾಗತದಿಂದ ಬರಮಾಡಿಕೊಂಡಿದೆ.
ಮೆರೂನ್ ಸೂಟ್ ಧರಿಸಿ ನ್ಯೂಯಾರ್ಕ್ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಮೋದಿ ಅವರನ್ನು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಹಾಗೂ ಅಮೆರಿಕದ ಅಧಿಕಾರಿಗಳು ಅದ್ಧೂರಿ ಸ್ವಾಗತದಿಂದ ಬರ ಮಾಡಿಕೊಂಡಿದ್ದು, ನ್ಯೂಯಾರ್ಕ್ ಪ್ಯಾಲೇಸ್‌ನಲ್ಲಿ ಮೋದಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ವಿಶ್ವಸಂಸ್ಥೆಯಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕ ಭೇಟಿ ಹಿನ್ನಲೆಯಲ್ಲಿ ಮೋದಿ ಅವರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಅಮೆರಿಕ ರಹಸ್ಯ ಭದ್ರತಾ ಪಡೆಗಳನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಕಾಶ್ಮೀರ ವಿವಾದದ ಕುರಿತು ಮೋದಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


