ಪ್ರಧಾನ ಸುದ್ದಿ

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣ

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣ
Published On :

ಚೆನ್ನೈ: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದ ಒ. ಪನ್ನೀರ್ ಸೆಲ್ವಂ ಅವರು ಸೋಮವಾರ ಎರಡನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಮಧ್ಯಾಹ್ನ ರಾಜಭವನದ ದರ್ಬಾರ್ ಹಾಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಸೆಲ್ವಂ ಅವರು ದೇವರ ಹೆಸರಿನಲ್ಲಿ ಕಣ್ಣೀರಿಡುತ್ತ ಪ್ರಮಾಣ ವಚನ ಸ್ವೀಕರಿಸಿದರು. ಸೆಲ್ವಂ ಅವರಿಗೆ ರಾಜ್ಯಪಾಲ ಕೆ.ರೋಸಯ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಜಯಲಲಿತಾ ಅವರಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ನಿರೀಕ್ಷೆಯಂತೆ ನಿನ್ನೆ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿತ್ತು. ಭಾನುವಾರ ಚೆನ್ನೈನಲ್ಲಿ ತರಾತುರಿಯಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಯಲಲಿತಾ ಅವರ ಪರಮಾಪ್ತ ಪನ್ನೀರ್ ಸೆಲ್ವಂರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಬಳಿಕ ಶಾಸಕರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿ ಮಾಡಿ ತಮ್ಮ ನಿರ್ಧಾರ ಪ್ರಕಟಿಸಿದ್ದರು.

ಸೆಲ್ವಂ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವಂತೆ ಜಯಲಲಿತಾ ಅವರು ಬೆಂಗಳೂರಿನಲ್ಲೇ ಸೂಚಿಸಿದ್ದರು. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಜಯಲಲಿತಾ ಅವರು ಸೆಲ್ವಂರನ್ನೇ ಮುಂದಿನ ಸಿಎಂ ಆಗಿ ಆಯ್ಕೆ ಮಾಡುವಂತೆ ನ್ಯಾಯಾಲಯದಲ್ಲೇ ಪಕ್ಷದ ಮುಖಂಡರಿಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳುವ ಮೊದಲು ಜಯಲಲಿತಾ ಅವರು ಸೆಲ್ವಂ ಜತೆಗೆ ಕೆಲ ಕಾಲ ರಹಸ್ಯ ಸಮಾಲೋಚನೆಯನ್ನೂ ನಡೆಸಿದ್ದರು.

ಈ ಹಿಂದೆ 2001ರಲ್ಲಿ ಭೂಹಗರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾಗಲೂ ಜಯಲಲಿತಾ ಇದೇ ಸೆಲ್ವಂರನ್ನು ಸಿಎಂ ಆಗಿ ನೇಮಿಸಿದ್ದರು. ಜಯಲಲಿತಾ ನೆಚ್ಚಿನ ಬಂಟನಾಗಿರುವ ಸೆಲ್ವಂ ಆರು ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.