ಪ್ರಧಾನ ಸುದ್ದಿ

ಜಯಲಲಿತಾ ಅರ್ಜಿ ವಿಚಾರಣೆ ಮುಂದೂಡಿಕೆ

ಜಯಲಲಿತಾ ಅರ್ಜಿ ವಿಚಾರಣೆ ಮುಂದೂಡಿಕೆ
Published On :

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯಾಗಿ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಹಾಗು ಇತರೆ ಮೂವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಸದ್ಯ  ಹೈಕೋರ್ಟ್ ದಸರಾ ರಜೆಯಲ್ಲಿದೆ. ಹೀಗಾಗಿ ಜಯಲಲಿತಾ ಜಾಮೀನು ಅರ್ಜಿಯನ್ನು ಮಂಗಳವಾರಕ್ಕೆ ನಿಗದಿ ಮಾಡಲಾಗಿತ್ತು. ಇದರಂತೆ ನಿನ್ನೆ ನ್ಯಾ.ರತ್ನಕಲಾ ಅವರ ಪೀಠ ವಿಚಾರಣೆ ಕೈಗೆತ್ತಿಕೊಂಡಿತ್ತು. ಹಿರಿಯ ವಕೀಲ ರಾಮ್ ಜೇಠ್ಮಲಾನಿ ಜಯಲಲಿತಾ ಪರವಾಗಿ ವಾದಿಸಿದ್ದು, ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಬುಧವಾರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯ ಸಂಪೂರ್ಣ ಪರಿಶೀಲನೆ ಅಗತ್ಯವಿದೆ ಹಾಗು ರಜಾಕಾಲ ಪೀಠದಿಂದ ವಿಚಾರಣೆ ಸೂಕ್ತವಲ್ಲ ಎಂದು ನ್ಯಾ.ರತ್ನಕಲಾ ಅಭಿಪ್ರಾಯ ಪಟ್ಟಿದ್ದಾರೆ.

ಏತನ್ಮಧ್ಯೆ,  ಜೇಠ್ಮಲಾನಿ ಅವರು ಹೈಕೋರ್ಟ್‌ಗೆ ಆಗಮಿಸಿದ್ದರೂ ಅವರಿಗೆ ವಾದವನ್ನು ಮಂಡಿಸುವ ಅವಕಾಶವೇ ಸಿಗಲಿಲ್ಲ ಎಂದು ಬಲ್ಲಮೂಲಗಳು ಹೇಳಿವೆ.

ವಿಚಾರಣೆ ಮುಂದೂಡಿರುವುದರಿಂದ ಸೋಮವಾರದವರೆಗೆ ಜಯಲಲಿತಾ ಜೈಲಲ್ಲೇ ಇರಬೇಕಾಗುತ್ತದೆ. ನ್ಯಾಯಾಲಯ ರಜೆಯಲ್ಲಿರುವುದರಿಂದ ಒಂದು ವೇಳೆ ಸೋಮವಾರ ವಿಚಾರಣೆ ನಡೆಯದೇ ಇದ್ದರೆ, ಮಂಗಳವಾರದ ವರೆಗೆ ಜಯಲಲಿತಾ ಅವರು ಜೈಲಲ್ಲೇ ಇರಬೇಕಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.