ಪನ್ನೀರ್ ಸೆಲ್ವಂ ಭೇಟಿ ರದ್ದು

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ದೋಷಿ ತಮಿಳ್ನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ಮುಂದೂಡಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಪನ್ನೀರ್ ಸೆಲ್ವಂ ಅವರು ಬೆಂಗಳೂರಿಗೆ ಬರಲು ಟಿಕೆಟ್ ಕಾಯ್ದಿರಿಸಿದ್ದರು. ಸೆಲ್ವಂ ಅವರು ನಿನ್ನೆ ಜಯಲಲಿತಾ ಅವರನ್ನು ಭೇಟಿ ಮಾಡಲು ಯತ್ನಿಸಿದ್ದರೂ ಜಯಾ ಭೇಟಿಗೆ ನಿರಾಕರಿಸಿದ್ದರು. ಇಂದು ಜಯಾ ಮೇಲ್ಮನವಿ ವಿಚಾರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರಲು ಸೆಲ್ವಂ ಯೋಚಿಸಿದ್ದರು.
ಆದರೆ ಜಯಾ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿರುವುದರಿಂದ ಸೆಲ್ವಂ ಬೆಂಗಳೂರಿಗೆ ಪ್ರಯಾಣ ಬೆಳೆಸಿಲ್ಲ.
ಆದಾಗ್ಯೂ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ 2 ದಿನಗಳಿಂದ ಸುಮ್ಮನಿದ್ದ ಒ.ಪನ್ನೀರ್ ಸೆಲ್ವಂ ಇಂದು ತಮ್ಮ ಅಧಿಕೃತ ಕೆಲಸ ಆರಂಭಿಸಿದ್ದಾರೆ.
ತಮಿಳ್ನಾಡಿನ ಜನರಿಗೆ ವಿಜಯದಶಮಿ, ಆಯುಧ ಪೂಜಾ ಹಬ್ಬದ ಶುಭಾಶಯ ಕೋರಿದ ಅವರು ಮೀನುಗಾರರ ಬಿಡುಗಡೆ ಸಂಬಂಧ ಪ್ರಧಾನಿ ಮೋದಿಗೆ ಪತ್ರವನ್ನು ಬರೆದಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


