ಭೈರಪ್ಪಗೆ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ

ಬೆಳಗಾವಿ: ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ನ ಪ್ರಶಸ್ತಿ ಈ ಬಾರಿ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರಿಗೆ ದೊರೆತಿದೆ ಎಂದು ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಪಾಟೀಲ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಶಸ್ತಿಯು 1ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಜು. 30ರಂದು ಮಧ್ಯಾಹ್ನ 3.30ಕ್ಕೆ ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ನಡೆಯಲಿದೆ. ಸಾಹಿತಿ ಚೆನ್ನವೀರ ಕಣವಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com