ಐಎಎಸ್ ಆಕಾಂಕ್ಷಿಗಳಿಗಾಗಿ ಡಿಕೆ ರವಿ ಹೆಸರಲ್ಲಿ ಟ್ರಸ್ಟ್ ಸ್ಥಾಪನೆ: ಎಚ್‌ಡಿಕೆ
ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪಿದ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಹೆಸರಿನಲ್ಲಿ ಐಎಎಸ್ ಆಕಾಂಕ್ಷಿಗಳಿಗಾಗಿ ಟ್ರಸ್ಟ್ ಸ್ಥಾಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಗರದ ಒಕ್ಕಲಿಗ ಕಲಾಕ್ಷೇತ್ರದಲ್ಲಿ ನಡೆದ ಒಕ್ಕಲಿಗ ಸಂಘ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್‌ಡಿಕೆ, ಐಎಎಸ್ ಆಕಾಂಕ್ಷಿಗಳಿಗೆ ನೆರವು ನೀಡು ಉದ್ದೇಶದಿಂದ ರವಿ ಹೆಸರನಲ್ಲಿ ಒಂದು ಟ್ರಸ್ಟ್ ಸ್ಥಾಪಿಸಲಾಗುವುದು ಮತ್ತು ಈ ಟ್ರಸ್ಟ್ ಮೂಲಕ ಐಎಎಸ್ ಮುಖ್ಯ ಪರೀಕ್ಷೆಗೆ ಅರ್ಹರಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ತಲಾ 10 ಸಾವಿರ ರುಪಾಯಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ತಿಳಿಸಿದರು.
ಈ ಟ್ರಸ್ಟ್ ಬರೀ ಒಕ್ಕಲಿಗೆ ಅಭ್ಯರ್ಥಿಗಳಿಗೆ ಮಾತ್ರವಲ್ಲದೆ ಸಮಾಜದ ಇತರೆ ವರ್ಗದ ಐಎಎಸ್ ಆಕಾಂಕ್ಷಿಗಳು ವಿದ್ಯಾರ್ಥಿ ವೇತನ ನೀಡಲಿದೆ ಎಂದು ಕುಮಾರಸ್ವಾಮೀ ಸ್ಪಷ್ಟಪಡಿಸಿದರು.
ಇದೇ ವೇಳೆ ಒಕ್ಕಲಿಗ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ಜೆಡಿಎಸ್ ನಾಯಕ ಹೇಳಿದರು. ಈ ವೇಳೆ ಒಕ್ಕಲಿಗ ಸ್ವಾಮೀಜಿ ನಿರ್ಮಾಲಾನಂದ ಸ್ವಾಮಿ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಅಪ್ಪಾಜಿ ಗೌಡ ಮತ್ತು ಉಪಾಧ್ಯಕ್ಷ ದೇವೇಗೌಡ ಸಹ ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ