ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರ ಕಾಲೋನಿಗೆ ಯಾಸಿನ್ ಮಲಿಕ್ ವಿರೋಧ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು...
ಯಾಸಿನ್ ಮಲಿಕ್
ಯಾಸಿನ್ ಮಲಿಕ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು ಜಾಗ ನೀಡುವುದಾಗಿ ಕೇಂದ್ರ ಸರ್ಕಾರಕ್ಕೆ ಭರವಸೆ ಕೊಟ್ಟ ಮಾರನೆ ದಿನವೇ ಪ್ರತ್ಯೇಕವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾಶ್ಮೀರಿ ಪಂಡಿತರಗಾಗಿ ಕಾಲೋನಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ತಮ್ಮ ಸಂಘಟನೆ ವಿರೋಧಿಸುತ್ತದೆ ಎಂದು ಜೆಕೆಎಲ್‌ಎಫ್ ಅಧ್ಯಕ್ಷ ಯಾಸಿನ್ ಮಲಿಕ್ ಹೇಳಿದ್ದಾರೆ. ಅಲ್ಲದೆ ಕಾಶ್ಮೀರ ಸರ್ಕಾರದ ಈ ನಿರ್ಧಾರದ ವಿರುದ್ಧ ಶುಕ್ರವಾರ ಮತ್ತು ಶನಿವಾರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಪಿ ವಕ್ತಾರ ಎಂಡಿ ನಯೀಮ್ ಅವರು, ಕಾಶ್ಮೀರಿ ಪಂಡಿತರುಗಳು ನಮ್ಮ ಜೀವನದ ಗೌರವಾನ್ವಿತ ಮತ್ತು ಪ್ರತಿಷ್ಠೆಯ ಭಾಗವಾಗಿದ್ದಾರೆ. ಹಾಗಾಗಿ ಸರ್ಕಾರ ಅವರನ್ನು ಮತ್ತೆ ವಾಪಸ್ ಕರೆಸಿಕೊಳ್ಳುತ್ತಿದೆ ಎಂದು ಹೇಳಿಕೆ ನೀಡಿದ್ದರು.

ನಿನ್ನೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಸಯೀದ್, ಟೈನ್‌ಶಿಪ್‌ಗಾಗಿ ಶೀಘ್ರದಲ್ಲೇ ಭೂಮಿ ಸ್ವಾಧೀನ ಪ್ರಕ್ರಿಯೆ ಆರಂಭಿಸುವುದಾಗಿ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com