
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.
ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಆನಂದ್ ಸಿಂಗ್ ಅವರನ್ನು ಬಂಧಿಸಿ, ಮಧ್ಯಾಹ್ನ ಬೆಂಗಳೂರಿನ ಲೋಕಾಯುಕ್ತ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆನಂದ್ ಸಿಂಗ್ ಅವರನ್ನು ಏಪ್ರಿಲ್ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಈ ಹಿಂದೆ ಇದೇ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಆನಂದ್ ಸಿಂಗ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಆನಂದ್ ಸಿಂಗ್ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಕಳೆದ 2013 ಅಕ್ಟೋಬರ್ 17ರಂದು ಶಾಸಕ ಆನಂದ್ ಸಿಂಗ್ ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.
Advertisement