ಬಿಬಿಎಂಪಿ ಚುನಾವಣೆ: ವಿಚಾರಣೆ ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಚುನಾವಣೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಬುಧವಾರಕ್ಕೆ ಮುಂದೂಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಚುನಾವಣೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಬುಧವಾರಕ್ಕೆ ಮುಂದೂಡಿದೆ.

ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿ, ಸರ್ಕಾರ ಬಿಬಿಎಂಪಿಯನ್ನು ಮೂರು ಭಾಗ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ. ಆದ್ದರಿಂದ 198 ವಾರ್ಡ್‍ಗಳಿಗೆ ಚುನಾವಣೆ ನಡೆಸಬೇಕೆಂಬ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮೇಲ್ಮನವಿ ಸಲ್ಲಿಸಿತ್ತು.

ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ವಿಚಾರಣೆಯನ್ನು      ಏಪ್ರಿಲ್ 15ಕ್ಕೆ ಮುಂದೂಡಿದೆ.

ಚುನಾವಣೆ ಆಯೋಗಕ್ಕೆ ಮೀಸಲಾತಿ ಪಟ್ಟಿ ಸಲ್ಲಿಸಬೇಕಾಗಿರುವುದರಿಂದ ವಿಚಾರಣೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದರು. ರಾಜ್ಯ ಸರ್ಕಾರದ ಮನವಿಗೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಏಕ ಸದಸ್ಯಪೀಠ, ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ಆದೇಶಿಸಿದೆ. ಸರ್ಕಾರ ಏ.13ಕ್ಕೆ ವಾರ್ಡ್ ಮೀಸಲು ಪಟ್ಟಿ ನೀಡದಿದ್ದರೆ ಹಿಂದಿನ ಮೀಸಲಿನಂತೆಯೇ ಚುನಾವಣೆ ನಡೆಸಬೇಕು ಎಂದೂ ತಾಕೀತು ಮಾಡಿತ್ತು. ಇದರಂತೆ ಚುನಾವಣೆ ಆಯೋಗ ಚುನಾವಣೆ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿದ್ದು, ವೀಕ್ಷಕರನ್ನೂ ನೇಮಿಸಿದೆ.ಸರ್ಕಾರ ಮೀಸಲು ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಯನ್ನೂ ನಡೆಸಿದೆ. ಏತನ್ಮಧ್ಯೆ, ಹೈಕೋರ್ಟ್‍ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮನವಿಯನ್ನೂ ಸಲ್ಲಿಸಿದೆ.

ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿ, ಸರ್ಕಾರ ಬಿಬಿಎಂಪಿಯನ್ನು ಮೂರು ಭಾಗ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ. ಆದ್ದರಿಂದ 198 ವಾರ್ಡ್‍ಗಳಿಗೆ ಚುನಾವಣೆ ನಡೆಸಬೇಕೆಂಬ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿತ್ತು.

ಈ ನಡುವೆ ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪವನ್ನು ಹಲವು ವಿವರಣೆಗಳನ್ನು ಕೇಳಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ, ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಲ್ಲಿ ಚುನಾವಣೆ ಭವಿಷ್ಯ ಅಡಗಿದೆ.

ಇದಕ್ಕೂ ಮುನ್ನ ಏಕಸದಸ್ಯ ಪೀಠದಲ್ಲಿ ಅರ್ಜಿ ಸಲ್ಲಿಸಿ ಚುನಾವಣೆಯನ್ನು ನಿಗದಿತ ಸಮಯದಲ್ಲಿ ನಡೆಸಬೇಕು ಎಂದು ಮನವಿ ಮಾಡಿದ್ದ ಕಾರ್ಪೊರೇಟರ್‍ಗಳಾದ ಸಿ.ಕೆ. ರಾಮಮೂರ್ತಿ ಹಾಗೂ ಸೋಮಶೇಖರ್ ಅವರು ವಿಭಾಗೀಯ ಪೀಠದಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ಸರ್ಕಾರದ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ಮೂಲ ಅರ್ಜಿದಾರರ ವಾದವನ್ನೂ ಆಲಿಸಬೇಕಾಗುತ್ತದೆ.

ಒತ್ತಡದಲ್ಲಿ ಸರ್ಕಾರ
ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದಂತೆ ಸರ್ಕಾರ ಮೀಸಲು ಪಟ್ಟಿ ಪ್ರಕಟಿಸುವ ಅಂತಿಮ ಹಂತದಲ್ಲಿದೆ. ಏ.13ರೊಳಗೆ ಅಂತಿಮ ಮೀಸಲು ಪಟ್ಟಿ ಆಯೋಗಕ್ಕೆ ನೀಡಬೇಕು. ಹೀಗಾಗಿ ಸರ್ಕಾರ ಏ.4ರಂದು 198 ವಾರ್ಡ್‍ಗಳಿಗೆ ಮೀಸಲು ಪಟ್ಟಿಯನ್ನು ಪ್ರಕಟಿಸಿ, ಸಾರ್ವಜನಿಕರಿಗೆ ಏಳು ದಿನ ಆಕ್ಷೇಪಣೆಗೆ ಅವಕಾಶ ಕಲ್ಪಿಸಿತ್ತು. ಈ ಮೀಸಲು ಪಟ್ಟಿಗೆ 700ಕ್ಕೂ ಹೆಚ್ಚು ಆಕ್ಷೇಪಗಳು ಸಲ್ಲಿಕೆಯಾಗಿದ್ದವು. ಇದರೊಂದಿಗೆ ಮೇಯರ್ ಸೇರಿದಂತೆ ಬಿಬಿಎಂಪಿಯ ಆಡಳಿತ ಮತ್ತು ಪ್ರತಿಪಕ್ಷದ ಅನೇಕ ಸದಸ್ಯರು ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮೀಸಲು ಸಮಸ್ಯೆಗಳನ್ನು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಅದೆಲ್ಲವನ್ನು ಪರಿಶೀಲಿಸಿದ್ದಾರೆ. ಹಾಗೆಯೇ ಅನೇಕ ವಾರ್ಡ್‍ಗಳ ಮೀಸಲು ಪಟ್ಟಿಯನ್ನು ಮರುನಿಗದಿ ಮಾಡಿದ್ದಾರೆ. ಪಟ್ಟಿಯ ಅಂತಿಮ ಅಧಿಸೂಚನೆ ಸಿದ್ಧವಾಗಿದ್ದು, ಮುಖ್ಯಮಂತ್ರಿ ಅನುಮತಿಯಷ್ಟೇ ಬಾಕಿ ಇದ್ದು, ಇದಕ್ಕೆ ಒಪ್ಪಿಗೆ ಸಿಕ್ಕರೆ ಸೋಮವಾರ ಮೀಸಲು ಪಟ್ಟಿ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಭೆ ನಡೆಸಿದ ಮುಖ್ಯಮಂತ್ರಿ ಕಾದು ನೋಡುವ ನಿರ್ಧಾರ
ಸುಗ್ರೀವಾಜ್ಞೆ ಪ್ರಸ್ತಾಪಕ್ಕೆ ಸಾಕಷ್ಟು ವಿವರಣೆಯನ್ನು ಕೇಳಿರುವ ರಾಜ್ಯಪಾಲರು ಅದನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ಈ ಸಂಬಂಧ ಭಾನುವಾರ ತುರ್ತಾಗಿ ನಗರಕ್ಕೆ ಸಂಬಂಧಿಸಿದ ಹಾಗೂ ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಹಾದಿಯ ಬಗ್ಗೆ ಸೋಮವಾರ ಹೈಕೋರ್ಟ್ ನೀಡುವ ತೀರ್ಪಿನ ನಂತರ ತೀರ್ಮಾನಿಸಲು ನಿರ್ಧರಿಸಿದ್ದಾರೆ.

ರಾಜ್ಯಪಾಲರು ಕೇಳಿರುವ ವಿವರಣೆಯನ್ನು ಒದಗಿಸುವ ಬಗ್ಗೆ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಆದರೆ, ಸೋಮವಾರವೇ ಹೈಕೋರ್ಟ್‍ನಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಬರಲಿದ್ದು, ಬಿಬಿಎಂಪಿ ಚುನಾವಣೆ ಕುರಿತು ಸ್ಪಷ್ಟ ದಾರಿ ಗೋಚರಿಸಲಿದೆ. ಆ ನಂತರವಷ್ಟೇ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳೋಣ. ಒಂದು ದಿನದ ಮಟ್ಟಿಗೆ ಸುಗ್ರೀವಾಜ್ಞೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದನ್ನು ಮುಂದೂಡೋಣ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇದು ಎಲ್ಲ ಸಚಿವರ ಅಭಿಪ್ರಾಯವೂ ಆಗಿತ್ತು ಎನ್ನಲಾಗಿದೆ.

ಮೇ 20ಕ್ಕೆ ಚುನಾವಣೆ? 19ಕ್ಕೆ ವೇಳಾ ಪಟ್ಟಿ ಬಿಡುಗಡೆ ಸಾಧ್ಯತೆ
ಚುನಾವಣೆ ತಡೆಯಲು ಹೈಕೋರ್ಟ್ ನಿರಾಕರಿಸಿದರೆ ಏ.18 ಅಥವಾ 19ರ ವೇಳೆಗೆ ಚುನಾವಣಾ ವೇಳಾಪಟ್ಟಿಯನ್ನು ಚುನಾವಣೆ ಆಯೋಗ ಪ್ರಕಟಿಸಿ, ಮೇ 20 ಅಥವಾ 22ರಂದು ಮತದಾನ ನಡೆಯುವ ನಿರೀಕ್ಷೆ ಇದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಸಿದ್ಧವಾಗಿದೆ. ಸರ್ಕಾರದಿಂದ ಮೀಸಲು ಪಟ್ಟಿ ಸಿಗಲಿ, ಬಿಡಲಿ ಏ.18-19ರಂದು ಚುನಾವಣಾ ದಿನಾಂಕ ಪ್ರಕಟಿಸಲು ಆಯೋಗ ತೀರ್ಮಾನಿಸಿದೆ. ಮೇ 20-21ಕ್ಕೆ ಚುನಾವಣೆ ನಡೆಸುವುದಕ್ಕೂ ಚಿಂತಿಸಿದೆ. ಏಕೆಂದರೆ, ಮೇ 25ರ ವೇಳೆಗೆ ಆಯೋಗ ಗ್ರಾಪಂ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕಿದೆ. ಆ ಹೊತ್ತಿಗೆ ಬಿಬಿಎಂಪಿ ಚುನಾವಣೆ ಮುಗಿಸುವ ಯತ್ನದಲ್ಲಿದೆ. ಅದಕ್ಕಾಗಿ ಸಕಲ ರೀತಿಯಲ್ಲಿ ಸಿದ್ಧತೆಯನ್ನೂ ನಡೆಸಿದೆ ಎಂದು ಆಯೋಗದ
ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com