

ಬೆಂಗಳೂರು: ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.
ಜೈಲಿನಲ್ಲಿ ಇದ್ದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹೊಸಪೇಟೆ (ವಿಜಯನಗರ)ಯ ಬಿಜೆಪಿ ಶಾಸಕ ಆನಂದ್ ಸಿಂಗ್, ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪನವರಿಗೆ ರವಾನಿಸಿದ್ದಾರೆ.