ಡಿಕೆ ರವಿ ನಿಗೂಢ ಸಾವು: ಸಿಬಿಐ ತನಿಖೆ ಆರಂಭ

ಡಿಕೆ ರವಿ
ಡಿಕೆ ರವಿ

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಕುರಿತು ಸಿಬಿಐ ಅಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ.

ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಸೂಚನೆ ಸೋಮವಾರವಷ್ಟೇ ಹೊರಬಿದ್ದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ತನಿಖೆಗಾಗಿ ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿರುವ ಚೆನ್ನೈ ಪ್ರಾದೇಶಿಕ ಕಚೇರಿ ಅಧಿಕಾರಿಗಳ ತಂಡ, ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಇಂದಿನಿಂದಲೇ ನಗರದಲ್ಲಿ ಕಾರ್ಯಾಚರಣೆ ಶುರು ಮಾಡಿರುವ ಸಿಬಿಐ ಅಧಿಕಾರಿಗಳು, ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢವಾಗಿ ಸಾವಿಗೀಡಾದ ಕೋರಮಂಗಲದಲ್ಲಿನ ಸೇಂಟ್ ಜಾನ್ಸ್‌ವುಡ್ ಅಪಾರ್ಟ್‌ಮೆಂಟ್ ಮತ್ತು ಸಂಬಂಧಪಟ್ಟ ದಾಖಲೆಗಳು, ಅವರು ಬಳಸುತ್ತಿದ್ದ ಮೊಬೈಲ್, ಈ-ಮೇಲ್, ಪೇಸ್‌ಬುಕ್ ಖಾತೆಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

ಕಾಲಮಿತಿ ಪರಿಷ್ಕರಣೆ: ಡಿ.ಕೆ.ರವಿ ನಿಗೂಢ ಸಾವನ್ನು ಸಿಬಿಐಗೆ ವಹಿಸುವಂತೆ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರಿಂದ ತೀವ್ರ ಒತ್ತಡ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಲು ನಿರ್ಧರಿಸಿತ್ತು. ಅಲ್ಲದೆ ತನಿಖೆಯನ್ನು ಮೂರು ತಿಂಗಳಲ್ಲಿ ಮುಗಿಸುವಂತೆ ಮಾ.24ರಂದು ಅದೇಶ ಹೊರಡಿಸಿತ್ತು. ಆದರೆ ರಾಜ್ಯ ಸರ್ಕಾರ ವಿಧಿಸಿದ್ದ ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಿಬಿಐ ರಾಜ್ಯದ ಅರ್ಜಿಯನ್ನು ತಿರಸ್ಕರಿಸಿದ್ದ ಬೆನ್ನಲ್ಲೇ, ಸರ್ಕಾರ ಏ.6ರಂದು ಕಾಲಮಿತಿ ಹೊರತುಪಡಿಸಿದ ಪರಿಷ್ಕೃತ ಆದೇಶ ಹೊರಡಿಸಿತ್ತು. ಆಗಲೇ ಸಿಬಿಐ ಅಧಿಕಾರಿಗಳು ತನಿಖೆಗೆ ಸಿದ್ಧತೆ ಮಾಡಿಕೊಂಡಿದ್ದರು. ಕೇಂದ್ರ ತಂಡವೋ ಅಥವಾ ಪ್ರಾದೇಶಿಕ ಕಚೇರಿಗಳ ಅಧಿಕಾರಿಗಳ ತಂವೋ ಎನ್ನುವ ಜಿಜ್ಞಾಸೆಯ ನಡುವೆ, ಚೆನ್ನೈ ಪ್ರಾದೇಶಿಕ ಕಚೇರಿ ಸಿಬಿಐ ಅಧಿಕಾರಿಗಳ ತಂಡ ಔಪಚಾರಿಕವಾಗಿ ನಗರಕ್ಕೆ ಬಂದು ಹೋಗಿ, ಸಿದ್ಧತೆ ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆಗೆ ಕಾಯುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com