ವೈದ್ಯ ಶಿಕ್ಷಣ ದುಬಾರಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಖಾಸಗಿ ಮೆಡಿಕಲ್ ಕಾಲೇಜು ಸೀಟು ಶೇ.10ರಷ್ಟು ದುಬಾರಿಯಾಗಿದೆ. ಆದರೆ ಸರ್ಕಾರಿ ವೈದ್ಯ ಕಾಲೇಜಿನ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡದೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲು ಸರ್ಕಾರ ಮುಂದಾಗಿದೆ.

ಕರ್ನಾಟಕ ವೃತ್ತಿಪರ ಕೋರ್ಸುಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿ ಕುರಿತು ಸರ್ಕಾರ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ನಡುವೆ ಸಮ್ಮತಾಭಿಪ್ರಾಯ ಒಪ್ಪಂದ ಮಾಡಿಕೊಳ್ಳುವ ಸಂಬಂಧ ವೈದ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಳೆದ ಸಾಲಿನ ಶುಲ್ಕಕ್ಕಿಂತ ಶೇ.10ರಷ್ಟು 2015-16ನೇ ಸಾಲಿಗೆ ಹೆಚ್ಚಿಸಲು ತೀರ್ಮಾನಿಸಲಾಯಿತು.

ವ್ಯತ್ಯಾಸದ ಮೊತ್ತ 2 ಲಕ್ಷ ರುಪಾಯಿ
ಡೀಮ್ಡ್ ವಿಶ್ವ ವಿದ್ಯಾಲಯಗಳ ವ್ಯಾಪ್ತಿಗೆ ಒಳಪಡುವ ವೈದ್ಯಕೀಯ ಮತ್ತು ದಂತವೈದ್ಯಕೀಯ ಕಾಲೇಜುಗಳಲ್ಲಿ ಪಿಜಿಸಿಇಟಿ ಹಾಗೂ ಸಿಇಟಿ ಮೂಲಕ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಸಂಬಂಧಪಟ್ಟ ವೈದ್ಯಕೀಯ ಕಾಲೇಜುಗಳ ನಿಗದಿಪಡಿಸುವ ಶುಲ್ಕವನ್ನೇ ಪಾವತಿಸಬೇಕಾಗುತ್ತದೆ. ಆದರೆ ಶುಲ್ಕ ಮರುಪಾವತಿಗೆ ಅರ್ಹರಾಗಿರುವ ಸೇವಾ ನಿರತ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಕಾಮೆಡ್-ಕೆ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ನಿಗದಿಪಡಿಸಿರುವ ಶುಲ್ಕವನ್ನು ಸರ್ಕಾರದಿಂದ ಮರುಪಾವತಿಸಲಾಗುತ್ತದೆ. ಅದರೆ, ವ್ಯತ್ಯಾಸದ ಮೊತ್ತವನ್ನು ಸ್ವತಃ ಅಭ್ಯರ್ಥಿಯೇ ಭರಿಸಬೇಕಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com