56 ದಿನಗಳ ವಿರಾಮದ ನಂತರ ರೈತರ ನಿಯೋಗ ಭೇಟಿ ಮಾಡಿದ ರಾಹುಲ್ ಗಾಂಧಿ

ಎರಡು ತಿಂಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ರೈತರೊಂದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾಲೋಚನೆ
ರೈತರೊಂದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾಲೋಚನೆ

ನವದೆಹಲಿ: ಎರಡು ತಿಂಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದರೆ. ನಾಳೆ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ ಮುಂಚಿತವಾಗಿ ರೈತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಚಿನ್ ಪೈಲಟ್ ಅವರ ಜೊತೆಗೆ ರಾಹುಲ್ ಗಾಂಧಿ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಪಂಜಾಬ್ ಮತ್ತು ಮಧ್ಯಪ್ರದೇಶ ರಾಜ್ಯಗಳಿಂದ ಬಂದಿದ್ದ ರೈತರನ್ನು ಭೇಟಿ ಮಾಡಿದ್ದಲ್ಲದೆ, ರೈತ ಪ್ರತಿನಿಧಿ ಸಂಘಗಳೊಂದಿಗೆ ಸಂವಾದ ನಡೆಸಿದ್ದಾರೆ. ಈ ಭೂಸ್ವಾಧೀನ ಸುಗ್ರೀವಾಜ್ಞೆಯ ವಿರುದ್ಧದ ರೈತರ ರ್ಯಾಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಾಯಕತ್ವ ವಹಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಲೋಕಸಭಾ ಚುನಾವಣೆಗಳ ದಯನೀಯ ಸೋಲಿನ ನಂತರ ರಾಹುಲ್ ಗಾಂಧಿ ಅವರು ಪರಿಪಕ್ವ ನಾಯಕರಾಗಿದ್ದಾರೆ ಎಂದು ತಿಳಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

"ನಾಳೆಯ ರ್ಯಾಲಿ ಐತಿಹಾಸಿಕ ರ್ಯಾಲಿಯಾಗಲಿದೆ. ಕೆಲವು ಜನರಿಗಷ್ಟೆ ಒಳಿತು ಮಾಡಲು ರೈತರನ್ನು ಬಲಿ ತೆಗೆದುಕೊಳ್ಳುತ್ತಿರುವ ಬಿಜೆಪಿ ಸರ್ಕಾರದ ನೀತಿಯನ್ನು ಬಯಲಿಗೆಳೆಯಲು ರಾಷ್ಟ್ರದ ವಿವಿಧ ರಾಜ್ಯಗಳಿಂದ ಲಕ್ಷಾಂತರ ರೈತರು ದೆಹಲಿಯಲ್ಲಿ ಸೇರಲಿದ್ದಾರೆ. ಸಣ್ಣ ಸಣ್ಣ ರೈತರ ಜಮೀನನ್ನು ವಶಪಡಿಸಿಕೊಳ್ಳಲು ಬಿಜೆಪಿ ಹುನ್ನಾರ ನಡೆಸಿದೆ" ಎಂದು ಸಚಿನ್ ಪೈಲಟ್ ಹೇಳಿದ್ದಾರೆ. ರ್ಯಾಲಿಯಲ್ಲಲದೆ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಸೋಮವಾರ ಪ್ರಾರಂಭವಾಗಲಿರುವ ಬಜೆಟ್ ನ ಎರಡನೆ ಅಧಿವೇಶನದಲ್ಲೂ ಮಾತನಾಡಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಲಿದ್ದಾರೆ ಎಂದು ಪಕ್ಷ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com