ಬಿಬಿಎಂಪಿ ಚುನಾವಣೆ ಘೋಷಿಸದಂತೆ ಚುನಾವಣಾ ಆಯೋಗಕ್ಕೆ 'ಹೈ' ಆದೇಶ

ಬೃಹತ್ ಬೆಂಗಳೂರು ಮಾಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಘೋಷಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ವಿಭಾಗೀಯ ಪೀಠ....
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಾಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಘೋಷಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ಆದೇಶಿಸಿದೆ.

ರಾಜ್ಯ ಸರ್ಕಾರದ ಸಲ್ಲಿಸಿದ್ದ ಮೇಲ್ಮನ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ರಾಮಮೋಹನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಏಪ್ರಿಲ್ 22ರವರೆಗೆ ಚುನಾವಣೆ ಘೋಷಿಸದಂತೆ ಸೂಚಿಸಿದೆ.

ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೌಲ್ಮನವಿ ಅರ್ಜಿ ಸಲ್ಲಿಸಿತ್ತು.

ಈ ಮಧ್ಯೆ ಬಿಬಿಎಂಪಿ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದ ರಾಜ್ಯ ಚುನಾವಣಾ ಆಯೋಗ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಲು ಮುಂದಾಗಿತ್ತು. ಆದರೆ ಹೈಕೋರ್ಟ್ ಆದೇಶದಿಂದಾಗಿ ರಾಜ್ಯ ಸರ್ಕಾರಕ್ಕೆ ಇನ್ನೆರಡು ದಿನಗಳ ಕಾಲಾವಕಾಶ ಸಿಕ್ಕಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com