ಬೆಂಗಳೂರು: ಏಪ್ರಿಲ್ 12ರಿಂದ ಏಪ್ರಿಲ್ 16ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದೆ. ಇಂಥ ಮಳೆ ಹಿಂದೆ ನೋಡಿರಲಿಲ್ಲ. ಇದರಿಂದ ಅಪಾರ ಹಾನಿಯಾಗಿದೆ. ಬೆಳೆ-ಜೀವ ಹಾನಿಯಾಗಿದ್ದು, ಈ ಕುರಿತು ನಾನಾ ಇಲಾಖೆಗಳಿಂದ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.
ಬೆಳೆ ಹಾನಿ ಪರಿಹಾರದ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, ಆಲಿಕಲ್ಲು ಮಳೆ ಬಂದಾಗ ಯಾವ ರೀತಿ ರೈತರಿಗೆ ವಿಶೇಷ ಪ್ಯಾಕೇಜ್ ಕೊಡಲಾಗಿತ್ತೋ ಅದೇ ರೀತಿ ಪ್ಯಾಕೇಜ್ ಕೊಡುತ್ತೇವೆ ಎಂದರು.
ಕೇಂದ್ರ ವಿಪತ್ತು ಪರಿಹಾರ ನಿಧಿ, ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಿಂತ ಹೆಚ್ಚು ಪರಿಹಾರ ನೀಡುತ್ತೇವೆ. ಪರಿಹಾರಕ್ಕಾಗಿ ಕೇಂದ್ರ ನೆರವು ಕಾಯುತ್ತಾ ಕೂರಲ್ಲ. ನಂತರ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಸಿಎಂ ಸದನಕ್ಕೆ ತಿಳಿಸಿದರು.
ಈ ವೇಳೆ ಪ್ರತಿಪಕ್ಷ ಬಿಜೆಪಿ ಸಹ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಒತ್ತಾಯಿಸಿತು.
Advertisement