ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಬಾಬಾ ರಾಮ್‌ದೇವ್

ಹರಿಯಾಣದ ಬಿಜೆಪಿ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನದ ಆಹ್ವಾನವನ್ನು ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ....
ಬಾಬಾ ರಾಮ್‌ದೇವ್
ಬಾಬಾ ರಾಮ್‌ದೇವ್
Updated on

ಚಂಡೀಗಢ: ಹರಿಯಾಣದ ಬಿಜೆಪಿ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನದ ಆಹ್ವಾನವನ್ನು ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ ತಿರಸ್ಕರಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗ ಗುರು, 'ನಾನು ಒಬ್ಬ ಸನ್ಯಾಸಿ, ಮಾನವಿಯತೆಯಿಂದ ಸೇವೆ ಮಾಡುವುದು ನನ್ನ ಉದ್ದೇಶ. ನಾನು ಯಾವುದೇ ಸಚಿವ ಸ್ಥಾನ ಅಥವಾ ಸ್ಥಾನಮಾನ ಬಯಸುತ್ತಿಲ್ಲ' ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಹರಿಯಾಣ ಸಿಎಂ ಖಟ್ಟರ್, ರಾಮ್‌ದೇವ್ ಅವರು ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದು ಹೇಳಿದ್ದಾರೆ. ಆದರೆ ಈಗಲೂ ನಾನು ಅವರಿಗೆ ಸರ್ಕಾರದ ಶಿಷ್ಟಾಚಾರವನ್ನು ಒಪ್ಪಿಕೊಳ್ಳಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ರಾಮ್‌ದೇವ್‌ ಅವರನ್ನು ಯೋಗ ಮತ್ತು ಆಯುರ್ವೇದ ಪ್ರಚಾರ ರಾಯಭಾರಿಯಾಗಿ ಹರಿಯಾಣ ಸರ್ಕಾರ ನೇಮಿಸಿದ್ದು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ನಿರ್ಧರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com