
ನವದೆಹಲಿ: ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಇಂದು ತಮ್ಮ ಟ್ವಿಟರ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ಭೂಕಂಪನ ಎಲ್ಲೆಲ್ಲಿ ಆಗಿದೆ ಎಂಬುದರ ಕುರಿತಂತೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಕ್ಷಣಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಪಷ್ಟಮಾಹಿತಿ ತಿಳಿದ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ನವದೆಹಲಿಯ ಸುತ್ತಮುತ್ತಲಿನ ಪ್ರದೇಶವಾದ ಪಾಟ್ನಾ, ಅಸ್ಸಾಂ, ಜಾರ್ಖಾಂಡ್, ಕೋಲ್ಕತಾ, ಲಖನೌ ಸೇರಿದಂತೆ ಉತ್ತರ ಹಾಗೂ ಪೂರ್ವ ಭಾರತದ ಹಲವೆಡೆ ಸುಮಾರು 10 ರಿಂದ 20 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿತ್ತು. ಭೂ ಕಂಪನದಿಂದಾಗಿ ಜನರು ತಮ್ಮ ಆತಂಕ ವ್ಯಕ್ತಪಡಿಸಿದ್ದು, ತಮ್ಮ ಮನೆ ಹಾಗೂ ಕಚೇರಿಯಿಂದ ಹೊರ ಬಂದಿದ್ದರು. ಇದೀಗ ದೆಹಲಿಯಲ್ಲಿ ಮತ್ತೆ ಮತ್ತೆ ಭೂಮಿ ಕಂಪಿಸುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ.
Advertisement