100 ಸ್ಮಾರ್ಟ್ ಸಿಟಿ ನಿರ್ಮಾಣ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ

ದೇಶದಲ್ಲಿ 100 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ 100 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕಳೆದ ವರ್ಷ ಎನ್ ಡಿ ಎ ಸರ್ಕಾರ ತನ್ನ ಚೊಚ್ಚಲ ಬಜೆಟ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಘೋಷಿಸಿತ್ತು.

ಸ್ಮಾರ್ಟ್ ಆಗಲಿವೆ ರಾಜ್ಯದ ಆರು ನಗರಗಳು
ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತಿದೆ.

ಸ್ಮಾರ್ಟ್ ಹೇಗೆ?
ಪ್ರತಿಯೊಂದು ಸ್ಮಾರ್ಟ್ ಸಿಟಿಗೂ ರು.500ದ ಕೋಟಿ ವೆಚ್ಚವಾಗುತ್ತದೆ. ಇದರಲ್ಲಿ ಪಾರ್ಕಿಂಗ್ ವ್ಯವಸ್ಥೆ, 24 ಗಂಟೆ ವಿದ್ಯುತ್, ಅತ್ಯುತ್ತಮ ಒಳಚರಂಡಿ ವ್ಯವಸ್ಥೆ ಇರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com