ಚುನಾವಣೆ ನಂತರ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಿದೆ: ಕೇಜ್ರಿವಾಲ್
ನವದೆಹಲಿ: ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವಿನ ಕಾದಾಟವನ್ನು ಪ್ರಸ್ತಾಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಚುನಾವಣೆ ನಂತರ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಿದೆ ಎಂದು ಬುಧವಾರ ಹೇಳಿದ್ದಾರೆ.
'ಎಎಪಿ ಮತ್ತು ಬಿಜೆಪಿ ನಡುವಿನ ಕಾದಾಟ ಚುನಾವಣೆವರೆಗೆ ಮಾತ್ರ ಇರುತ್ತದೆ ಎಂದು ನಾವು ಭಾವಿಸಿದ್ದೇವು. ಆದರೆ ಚುನಾವಣೆ ನಂತರವೇ ನಿಜವಾದ ಹೋರಾಟ ಆರಂಭವಾಗಿದೆ ಅಂತ ನಮಗೆ ಈಗ ಅನಿಸುತ್ತಿದೆ. ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸೇಡು ತೀರಿಸಿಕೊಳ್ಳುತ್ತಾರೆ ಅಂದುಕೊಂಡಿದ್ದೇವು. ಆದರೆ ನಮ್ಮ ಗೆಲುವಿನ ನಂತರ ಜಾಸ್ತಿ ಸೇಡು ತೀರಿಸಿಕೊಳ್ಳುತ್ತಾರೆ ಅಂತ ನಮಗೆ ಗೊತ್ತಿರಲಿಲ್ಲ' ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದೆಹಲಿ ಸಿಎಂ, 'ನಾವು ನ್ಯಾಯಯುತವಾಗಿ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಈ ಹೋರಾಟದಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಐದು ವರ್ಷಗಳಲ್ಲಿ ದೆಹಲಿಯಲ್ಲಿ ಸಂಪೂರ್ಣವಾಗಿ ಬದಲಾವಣೆ ತರಲು ಎಲ್ಲಾ ರೀತಿಯ ಯತ್ನ ಮಾಡುತ್ತೇವೆ' ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ